ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ: ರಾಜ್ಯ ಸಚಿವ ಸಂಪುಟ ಸಭೆ ಮಂದೂಡಿಕೆ

ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರ ಕುರಿತು ಚರ್ಚೆ ನಡೆಸಲು ಕರೆಯಲಾಗಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರ ಕುರಿತು ಚರ್ಚೆ ನಡೆಸಲು ಕರೆಯಲಾಗಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿದೆ  ಎಂದು ತಿಳಿದುಬಂದಿದೆ.
ನಿನ್ನೆಯಷ್ಟೇ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಸಿಎಂ ಸಿದ್ದರಾಮಯ್ಯ ಅವರು, ನಾಳೆ ಸಂಚಿವ ಸಂಪುಟ ಸಭೆ ಕರೆದಿದ್ದು, ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ನಿರ್ಧರಿಸಲಾಗುತ್ತದೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಲಿಂಗಾಯತ ಪ್ರತ್ಯೇಕ ಧರ್ಮ ರಚನೆ ಸಂಬಂಧ ರಾಜ್ಯದ ಪ್ರಮುಖ ಮಠಾಧೀಶರು ವಿರೋಧ ವ್ಯಕ್ತಪಡಿಸಿದ್ದರೆ, ಸ್ವತಃ ವೀರಶೈವ ಮಹಾಸಭಾ ಕೂಡ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಲ್ಲದೇ ತನ್ನ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಪ್ರತ್ಯೇಕ ಲಿಂಗಾಯತ ಧರ್ಮ ರಚನೆಯನ್ನು ತಾನು ವಿರೋಧಿಸುವುದಾಗಿ ಹೇಳಿತ್ತು.
ಅಲ್ಲದೆ ಸರ್ಕಾರದ ಈ ನಿರ್ಧಾರಕ್ಕೆ ಬಿಜೆಪಿ ಕೂಡ ವಿರೋಧ ವ್ಯಕ್ತಪಡಿಸಿದ್ದಲ್ಲದೇ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ವೀರಶೈವ ಮಹಾಸಭದ ಅಧ್ಯಕ್ಷ ಶ್ಯಾಮನೂರು ಶಿವಶಂಕರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು,ವ್ಯಾಪಕ ಸುದ್ದಿಗೆ ಗ್ರಾಸವಾಗಿತ್ತು.
ವೀರಶೈವ ಮಹಾಸಭಾ ನಿರ್ಧಾರ ಪ್ರಕಟವಾದ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಅವರು ಈ ಬಗ್ಗೆ ನಿರ್ಣಯ ಕೈಗೊಳ್ಳಲು ಕರೆಯಲಾಗಿದ್ದ ಸಚಿವ ಸಂಪುಟ ಸಭೆಯನ್ನು ಮುಂದೂಡಿದ್ದಾರೆ. ಸಿಎಂ ಕಚೇರಿ ಮೂಲಗಳಿಂದ ಸಂಪುಟ ಸಭೆ ಮುಂದೂಡಿಕೆಗೆ ನಿಖರ ಕಾರಣ ನೀಡಿಲ್ಲ. 
ಇನ್ನು ಕಳೆದ ಮಾರ್ಚ್ 8ರಂದು ನಡೆದಿದ್ದ ಸಚಿವ ಸಂಪುಟ ಸಭೆಯಲ್ಲೂ ಈ ಬಗ್ಗೆ ಕೂಲಂಕುಷ ಚರ್ಚೆ ನಡೆಸಲಾಗಿತ್ತು. ಆದರೆ ನಿರ್ಧಾರ ಕೈಗೊಳ್ಳಲು ಸಭೆ ವಿಫಲವಾಗಿತ್ತು. ಇದೇ ಕಾರಣಕ್ಕೆ ಇಂದು ನಡೆಯಬೇಕಿದ್ದ ಸಭೆ ಮಹತ್ವ ಪಡೆದಿತ್ತು. 
ಇನ್ನು ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರ ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತ ಸಮಿತಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ 7 ಮಂದಿಯ ಸಮಿತಿ ರಚನೆ ಮಾಡಿತ್ತು. ಈಗಾಗಲೇ ನಾಗಮೋಹನ್ ದಾಸ್ ಸಮಿತಿ ತಮ್ಮ ವರದಿಯನ್ನು ಸರ್ಕಾರಕ್ಕೆ ವರದಿ ನೀಡಿದ್ದು, ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುವುದಾಗಿ ಈ ಹಿಂದೆ ಸಿಎಂ ಸಿದ್ದರಾಮಯ್ಯ ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com