ಐಪಿಎಸ್ ಅಧಿಕಾರಿಗಳ ವಿರುದ್ಧ ಸಿಎಂಗೆ ಪತ್ರ ಬರೆದ ಕೆಎಸ್ಆರ್'ಪಿ ಪೊಲೀಸ್ ಸಿಬ್ಬಂದಿ ಸಂಘ

ಐಪಿಎಸ್ ಅಧಿಕಾರಿಗಳು ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದು, ನಿಯಮ ಉಲ್ಲಂಘಿಸುತ್ತಿದ್ದಾರೆಂದು ಆರೋಪಿಸಿ ರಾಜ್ಯ ಸಶಸ್ತ್ರ ಮೀಸಲು ಪಡೆಗಳ ಪೊಲೀಸ್ ಸಿಬ್ಬಂದಿ ಸಂಘ...
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು; ಐಪಿಎಸ್ ಅಧಿಕಾರಿಗಳು ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದು, ನಿಯಮ ಉಲ್ಲಂಘಿಸುತ್ತಿದ್ದಾರೆಂದು ಆರೋಪಿಸಿ ರಾಜ್ಯ ಸಶಸ್ತ್ರ ಮೀಸಲು ಪಡೆಗಳ ಪೊಲೀಸ್ ಸಿಬ್ಬಂದಿ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಅವರಿಗೆ ಪತ್ರ ಬರೆದಿದ್ದಾರೆ. 
ನೋಂದಣಿ ಮಾಡಿಸಿದ ಹಾಗೂ ಸರ್ಕಾರದ ಮಾನ್ಯತೆ ಪಡೆಯದ ಸಂಘ ಎಂದು ತಿಳಿಸಿರುವ ಕೆಎಸ್ಆರ್'ಪಿ ಪೊಲೀಸ್ ಸಿಬ್ಬಂದಿ ಸಂಘದ ಅಧ್ಯಕ್ಷರು ಸಿದ್ದರಾಮಯ್ಯ ಅವರಿಗೆ 4 ಪುಟಗಳ ಪತ್ರ ಬರೆದಿದ್ದಾರೆ. 
ಆರ್ಡರ್ಲಿ ನೇಮಕ ಮಾಡಿಕೊಳ್ಳುವಲ್ಲಿ ಐಪಿಎಸ್ ಅಧಿಕಾರಿಗಳು ನಿಯಮ ಉಲ್ಲಂಘಿಸಿದ್ದು, ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಹೆಚ್ಚಿನ ಸಿಬ್ಬಂದಿಗಳನ್ನು ಆರ್ಡರ್ಲಿಯಾಗಿ ನೇಮಕ ಮಾಡಿಕೊಳ್ಳುವ ಅಧಿಕಾರಿಗಳು, ವೈಯಕ್ತಿಕ ಕೆಲಸ ಮಾಡಿಸಿಕೊಳ್ಳುವ ಮೂಲಕ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಮನೆ ಒರೆಸುವುದು, ಶೌಚಾಲಯ ತೊಳೆಸುವುದು, ಮಕ್ಕಳನ್ನು ಆಡಿಸುವುದಕ್ಕೆ ಸಿಬ್ಬಂದಿಗಳನ್ನು ಬಳಸಿಕೊಳ್ಳುತ್ತಿದ್ದಾರೆ. 
ಆರ್ಡರ್ಲಿ ವ್ಯವಸ್ಥೆಯನ್ನು ಸರ್ಕಾರ ತೆಗೆದು ಹಾಕಿದ್ದರೂ, ಐಪಿಎಸ್ ಅಧಿಕಾರಿಗಳು ಮಾತ್ರ 20ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ನೇಮಕ ಮಾಡಿಕೊಂಡು ಲಾಭಗಳನ್ನು ಪಡೆಯುತ್ತಿದ್ದಾರೆ. ನಿವೃತ್ತಿ ಪಡೆದು ಅಧಿಕಾರದಿಂದ ಕೆಳಗಿದರೂ ಕೆಲ ಅಧಿಕಾರಿಗಳು ಲಾಭಗಳನ್ನು ಪಡೆದುಕೊಳ್ಳುತ್ತಿದ್ದಾರೆ. 
ಐಪಿಎಸ್ ಅಧಿಕಾರಿಗಳು ಕೆಳಗಿನ ಸಿಬ್ಬಂದಿಗಳನ್ನು ಅವರ ಜಾತಿಯ ಆಧಾರದ ಮೇಲೆ ನಡೆಸಿಕೊಳ್ಳುತ್ತಿದ್ದಾರೆ. ತಮಗೆ ಇಷ್ಟವಿಲ್ಲದ ಜಾತಿಯ ಸಿಬ್ಬಂದಿಯನ್ನು ಪದೇ ಪದೇ ಶಿಕ್ಷಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ತಮ್ಮ ಜಾತಿಯವರನ್ನು ಎಷ್ಟೇ ದೊಡ್ಡ ತಪ್ಪು ಮಾಡಿದ್ದರೂ ಅವರನ್ನು ಧಾರಾಳವಾಗಿ ಕ್ಷಮಿಸುತ್ತಿದ್ದು, ಅವರಿಗೆ ಬಡ್ತಿ ನೀಡುತ್ತಿದ್ದಾರೆ. ಅನ್ಯ ಜಾತಿ ಸಿಬ್ಬಂದಿಗಳಿಗೆ ಕಿರುಕುಳ ನೀಡುತ್ತಿದ್ದಾರೆಂದು ಪತ್ರದಲ್ಲಿ ತಿಳಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com