ವೀರಶೈವ ಮಠಾಧೀಶರಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿ ಸಲ್ಲಿಸಿರುವ....
ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ವೀರಶೈವ ಮಠಾಧೀಶರು
ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ವೀರಶೈವ ಮಠಾಧೀಶರು
ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ನಾಗಮೋಹನದಾಸ್ ಸಮಿತಿ ಸಲ್ಲಿಸಿರುವ ವರದಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಸರಣಿ ಪ್ರತಿಭಟನೆ ನಡೆಸುವುದಾಗಿ ವೀರಶೈವ ಮಠಾಧೀಶರು ಗುರುವಾರ ಎಚ್ಚರಿಕೆ ನೀಡಿದ್ದಾರೆ.
ಈ ಸಂಬಂಧ ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ 57 ವೀರಶೈವ ಮಠಾಧೀಶರ ನಿಯೋಗ,  ನಾಗಮೋಹನದಾಸ್ ಸಮಿತಿ ಶಿಫಾರಸು ಒಪ್ಪಿಕೊಳ್ಳದಂತೆ ಮನವಿ ಸಲ್ಲಿಸಿದ್ದಾರೆ. ಜತೆಗೆ, ಮನವಿಗೆ ಸ್ಪಂದಿಸದಿದ್ದರೆ ಕಾಂಗ್ರೆಸ್ ವಿರುದ್ಧ ನಿರಂತರ ಹೋರಾಟ ಅನಿವಾರ್ಯವಾಗಲಿದೆ ಎಂದಿದ್ದಾರೆ.
ಕಾಶಿ ಪೀಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಉಜ್ಜಯನಿ ಪೀಠದ ಸಿದ್ಧಲಿಂಗ ಸ್ವಾಮಿಜಿ ನೇತೃತ್ವದಲ್ಲಿ ವೀರಶೈವ ಮಠಾಧೀಶರು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಬಳಿಕ ಸುದ್ದಿಗಾರರರೊಂದಿಗೆ ಮಾತನಾಡಿದ ಮಠಾಧೀಶರು, ಸಮಾಜ ಒಡೆಯುವ ನಿರ್ಧಾರ ಕೈಗೊಳ್ಳದಂತೆ ಮನವಿ ಮಾಡಲಾಗಿದೆ. ಸಮಾಜಕ್ಕೆ ಉಪಕಾರ ‌ಮಾಡಲೇಬೇಕೆಂದಿದ್ದರೆ ವೀರಶೈವ-ಲಿಂಗಾಯತ ಧರ್ಮ ಎಂದು ಘೋಷಣೆ ಮಾಡಲಿ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com