ಪ್ರತ್ಯೇಕ ಲಿಂಗಾಯತ ಧರ್ಮ: ರಾಜ್ಯ ಸಚಿವ ಸಂಪುಟದಿಂದ ಕೇಂದ್ರಕ್ಕೆ ಶಿಫಾರಸು

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಚಿವ ಸಂಪುಟ ಸಭೆಯಲ್ಲಿ...
ಮಠಾಧೀಶರೊಂದಿಗೆ ಸಿದ್ದರಾಮಯ್ಯ
ಮಠಾಧೀಶರೊಂದಿಗೆ ಸಿದ್ದರಾಮಯ್ಯ
ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. 
ಇಂದು ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಬಸವಣ್ಣವೇ ಧರ್ಮಗುರು, ವಚನಗಳೇ ಧರ್ಮಗ್ರಂಥ. ಬಸವ ತತ್ವ, ವಚನಗಳನ್ನು ಒಪ್ಪುವವರಿಗೆ ಅಲ್ಪ ಸಂಖ್ಯಾತ ಧರ್ಮಕ್ಕೆ ಮಾನ್ಯತೆ ಎಂದು ಸಚಿವ ಟಿಬಿ ಜಯಚಂದ್ರ ಅವರು ತಿಳಿಸಿದ್ದಾರೆ. 
ಸಚಿವ ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಜಯಚಂದ್ರ ಅವರು ವೀರಶೈವ ಲಿಂಗಾಯತರು ಅಲ್ಪಸಂಖ್ಯಾತ ಲಿಂಗಾಯತರ ಭಾಗ. ವೀರಶೈವ ಪರಂಪರೆ ಪ್ರತಿಪಾದಕರಿಗೆ ಇಲ್ಲಿ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.
ಕರ್ನಾಟಕ ಅಲ್ಪಸಂಖ್ಯಾತ ಕಾಯ್ದೆ ಸೆಕ್ಷನ್ 2(ಡಿ)ಅಡಿಯಲ್ಲಿ ಲಿಂಗಾಯತ ಮತ್ತು ವೀರಶೈವ ಲಿಂಗಾಯತರಿಗೆ ಅಲ್ಪಸಂಖ್ಯಾತ ಮಾನ್ಯತೆ ನೀಡಲು ಶಿಫಾರಸು ಮಾಡಲಾಗಿದೆ. 
ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ಸಲ್ಲಿಸಿದ್ದ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಿದೆ. 
ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ನೀಡಿರುವ ಪ್ರತ್ಯೇಕ ಲಿಂಗಾಯತ ಧರ್ಮದ ವರದಿಯನ್ನು ಕೇಂದ್ರಕ್ಕೆ ಶಿಫಾರಸು ಮಾಡಬಾರದು ಎಂದು ಹುಬ್ಬಳ್ಳಿಯಲ್ಲಿ ರಂಭಾಪುರಿ ಶ್ರೀಗಳು ಮನವಿ ಮಾಡಿದ್ದರು. 
ಕರ್ನಾಟಕದ ಜನಸಂಖ್ಯೆಯಲ್ಲಿ ಶೇಖಡ 17ರಷ್ಟು ಲಿಂಗಾಯತ ಸಮುದಾಯವಿದ್ದು ರಾಜ್ಯ ರಾಜಕೀಯದಲ್ಲಿ ಈ ಸಮುದಾಯ ನಿರ್ಣಾಯಕರಾಗಿದ್ದರು. ಇದೀಗ ಪ್ರತ್ಯೇಕ ಲಿಂಗಾಯತರನ್ನು ವಿಭಜನೆಗೆ ರಾಜ್ಯ ಸರ್ಕಾರ ಮುಂದಾಗಿದ್ದು ಇದು ಬಿಜೆಪಿಗೆ ತೀವ್ರ ಹಿನ್ನಡೆ ಉಂಟು ಮಾಡಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com