‘ಪ್ರತ್ಯೇಕ ಲಿಂಗಾಯತ ಧರ್ಮ: ಸರ್ಕಾರದ ನಿರ್ಧಾರ ಸ್ಪಷ್ಟವಾಗಿಲ್ಲ: ಜಗದೀಶ್ ಶೆಟ್ಟರ್

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸರ್ಕಾರದ ನಿರ್ಧಾರ ಸ್ವಷ್ಪವಾಗಿಲ್ಲ, ಗೊಂದಲ ಮೂಡಿಸುತ್ತಿದೆ ಎಂದು ತಿಳಿಸಿದ್ದಾರೆ.
ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸರ್ಕಾರದ ನಿರ್ಧಾರ ಸ್ವಷ್ಪವಾಗಿಲ್ಲ, ಗೊಂದಲ ಮೂಡಿಸುತ್ತಿದೆ ಎಂದು ತಿಳಿಸಿದ್ದಾರೆ.

‘ನ್ಯಾಯಮೂರ್ತಿ ನಾಗಮೋಹನ ದಾಸ್ ಸಮಿತಿ‌ ನೇಮಿಸಿದ್ದು ಅಲ್ಪಸಂಖ್ಯಾತ ಆಯೋಗದಿಂದ. ಅವರು ಲಿಂಗಾಯತರಿಗೆ ಅಲ್ಪಸಂಖ್ಯಾತ ಮಾನ್ಯತೆ ನೀಡುವ ಕುರಿತು ವರದಿ‌ ನೀಡಿದ್ದಾರೆ. ಆದರೆ, ಇದುವರೆಗೆ ಪ್ರತ್ಯೇಕ ಧರ್ಮ ಎನ್ನುತ್ತಿದ್ದವರು ಈಗ ಅಲ್ಪಸಂಖ್ಯಾತ ಸ್ಥಾನಮಾನಕ್ಕೆ ಶಿಫಾರಸು ಮಾಡಿದ್ದಾರೆ’ ಎಂದು ಶೆಟ್ಟರ್ ವಿರೋಧ ವ್ಯಕ್ತಪಡಿಸಿದ್ದಾರೆ.

 ಜಾತಿ- ಜಾತಿಗಳ ಮಧ್ಯೆ ಕಲಹ ಸೃಷ್ಟಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮುಂದಿನ ಚುನಾವಣೆಯಲ್ಲಿ ಜನರೇ ಪಾಠ ಕಲಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com