ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಶಿಫಾರಸು 'ರಾಜಕೀಯ ನಿರ್ಧಾರ': ವೀರಶೈವರು

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸೋಮವಾರ....
ಚಂದ್ರಶೇಖರ್ ಹಿರೇಮಠ
ಚಂದ್ರಶೇಖರ್ ಹಿರೇಮಠ
ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸೋಮವಾರ ರಾಜ್ಯ ಸಚಿವ ಸಂಪುಟ ಒಪ್ಪಿಗೆ ಸೂಚಿಸಿರುವುದಕ್ಕೆ ವೀರಶೈವ ಲಿಂಗಾಯತ ಸಮನ್ವಯ ಸಮಿತಿ ತೀವ್ರ ವಿರೋಧ ವ್ಯಕ್ತಪಡಿಸಿದೆ.
ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡುವುದಕ್ಕೆ ನಾವು ವಿರೋಧ ವ್ಯಕ್ತಪಡಿಸಿದ್ದೇವೆ. ಸಮಿತಿಯಲ್ಲಿದ್ದವರಿಗೆ ನಮ್ಮ ಧರ್ಮದ ಬಗ್ಗೆ ಅಥವಾ ಇತರೆ ಧರ್ಮದ ಬಗ್ಗೆ ಯಾವುದೇ ಜ್ಞಾನ ಇಲ್ಲ. ಹೀಗಾಗಿ ನಾವು ಸಮಿತಿಯ ವರದಿಯನ್ನು ಬಲವಾಗಿ ವಿರೋಧಿಸಿದ್ದೇವು ಎಂದು ವೀರಶೈವ ಲಿಂಗಾಯತ ಸಮನ್ವಯ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಹಿರೇಮಠ ಅವರು ಹೇಳಿದ್ದಾರೆ.
ಕೇಂದ್ರಕ್ಕೆ ಶಿಫಾರಸು ಮಾಡುವ ರಾಜ್ಯ ಸರ್ಕಾರದ ನಿರ್ಧಾರ ಸಂಪೂರ್ಣ ರಾಜಕೀಯ ಪ್ರೇರಿತ. ಇದಕ್ಕೆ ನಮ್ಮ ವಿರೋಧವಿದೆ ಎಂದಿದ್ದಾರೆ.
ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ಸಲ್ಲಿಸಿದ್ದ ವರದಿಯನ್ನು ಇಂದು ಸಚಿವ ಸಂಪುಟ ಅಂಗೀಕರಿಸಿದ್ದು, ಕರ್ನಾಟಕ ಅಲ್ಪಸಂಖ್ಯಾತ ಕಾಯ್ದೆ ಸೆಕ್ಷನ್ 2(ಡಿ)ಅಡಿಯಲ್ಲಿ ಲಿಂಗಾಯತ ಮತ್ತು ವೀರಶೈವ ಲಿಂಗಾಯತರಿಗೆ ಅಲ್ಪಸಂಖ್ಯಾತ ಮಾನ್ಯತೆ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ಒಪ್ಪಿಗೆ ಸೂಚಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com