ಲಿಂಗಾಯತ ಧರ್ಮಕ್ಕೆ ಶಿಫಾರಸು ಮಾಡಿದರೆ ಕಾನೂನು ಹೋರಾಟ ನಡೆಸುತ್ತೇವೆ: ರಂಭಾಪುರಿ ಶ್ರೀ

ಪ್ರತ್ಯೇಕ ಲಿಂಗಾಯತ ಧರ್ಮದ ಮಾನ್ಯತೆಗೆ ರಾಜ್ಯವು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದರೆ ವೀರಶೈವರು ಕಾನೂನು ಹೋರಾಟದ ಹಾದಿಯನ್ನು ...
ರಂಭಾಪುರಿ ಪೀಠದ ಶ್ರೀ ವೀರ ಸೋಮೇಶ್ವರ ಶಿವಚಾರ್ಯ ಸ್ವಾಮೀಜಿ
ರಂಭಾಪುರಿ ಪೀಠದ ಶ್ರೀ ವೀರ ಸೋಮೇಶ್ವರ ಶಿವಚಾರ್ಯ ಸ್ವಾಮೀಜಿ
ಹುಬ್ಬಳ್ಳಿ: ಪ್ರತ್ಯೇಕ ಲಿಂಗಾಯತ ಧರ್ಮದ ಮಾನ್ಯತೆಗೆ ರಾಜ್ಯವು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದರೆ ವೀರಶೈವರು ಕಾನೂನು ಹೋರಾಟದ ಹಾದಿಯನ್ನು ಆಯ್ಕೆ ಮಾಡಿಕೊಳ್ಳುತ್ತದೆ ಎಂದು ರಂಭಾಪುರಿ ಪೀಠದ ಶ್ರೀ ವೀರ ಸೋಮೇಶ್ವರ ಶಿವಚಾರ್ಯ ಸ್ವಾಮೀಜಿ ಹೇಳಿದ್ದಾರೆ. 
ಒಂದು ವೇಳೆ ಸರ್ಕಾರ ಪ್ರತ್ಯೇಕ ಲಿಂಗಾಯತ ಧರ್ಮದ ಮಾನ್ಯತೆಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದರೇ ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. 
ಸುದ್ದಿಗೋಷ್ಠಿಯಲ್ಲಿ ಸೋಮವಾರ ಇಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತ್ಯಂತ ಎಚ್ಚರಿಕೆಯಿಂದ ವೀರಶೈವ ಲಿಂಗಾಯತ ಧರ್ಮದ ಬಗ್ಗೆ ತೀರ್ಮಾನ ಕೈಗೊಳ್ಳಬೇಕು. ಧರ್ಮರಚನೆಯ ಕುರಿತು ನಾಗಮೋಹನದಾಸ್ ಸಮಿತಿ ನೀಡಿರುವ ವರದಿ ಏಕಪಕ್ಷೀಯವಾಗಿದೆ’ ಎಂದರು.
ಕೇಂದ್ರ ಸರ್ಕಾರ ರಾಜ್ಯದ ಈ ಶಿಫಾರಸ್ಸನ್ನು  ಒಪ್ಪುವುದಿಲ್ಲ ಎಂಬ ನಂಬಿಕೆಯಿದೆ ಎಂದು ಭರವಸೆ ವ್ಯಕ್ತ ಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com