ಮೊಹಮ್ಮದ್ ನಲಪಾಡ್‌ಗೆ ಜಾಮೀನು ನೀಡದಂತೆ 'ಸುಪ್ರೀಂ'ಗೆ ರಾಜ್ಯ ಸರ್ಕಾರದಿಂದ ಕೇವಿಯಟ್

ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಶಾಂತಿನಗರದ ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್‌ಗೆ...
ಮೊಹಮ್ಮದ್ ಹ್ಯಾರಿಸ್ ನಲಪಾಡ್
ಮೊಹಮ್ಮದ್ ಹ್ಯಾರಿಸ್ ನಲಪಾಡ್
ನವದೆಹಲಿ: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಶಾಂತಿನಗರದ ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್‌ಗೆ ಜಾಮೀನು ನೀಡದಂತೆ ಸುಪ್ರೀಂಕೋರ್ಟ್ ಗೆ ರಾಜ್ಯ ಸರ್ಕಾರ ಕೇವಿಯಟ್ ಸಲ್ಲಿಸಿದೆ. 
ಪ್ರಕರಣದ ಸಂಬಂಧ ಮೊಹಮ್ಮದ್ ನಲಪಾಡ್ ಹಾಗೂ ಇತರ ಆರೋಪಿಗಳಿಗೆ ಜಾಮೀನು ನೀಡದಂತೆ ರಾಜ್ಯದ ವಕೀಲ ಸಂಜಯ್ ನೂಲಿ ಅವರು ಕೇವಿಯಟ್ ಸಲ್ಲಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಆರೋಪಿಗಳಿಗೆ ಜಾಮೀನು ನಿರಾಕರಿಸಿತ್ತು. 
ಸದ್ಯ ಮೊಹಮ್ಮದ್ ನಲಪಾಡ್ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿದ್ದು ಪರಪ್ಪನ ಅಗ್ರಹಾರದ ಸೆರೆ ಮನೆಯಲ್ಲಿ ಇಡಲಾಗಿದೆ. 
ಕಳೆದ ಫೆಬ್ರವರಿ 17ರಂದು ಮೊಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ಯು ಬಿ ಸಿಟಿಯ ಫರ್ಜಿ ಕೆಫೆಯಲ್ಲಿ ವಿದ್ವತ್ ಎಂಬ ಯುವಕನ ಮೇಲೆ ಹಲ್ಲೆ ಮಾಡಿದ್ದರು. ಈ ಸಂಬಂಧ ಎಲ್ಲಾ ಆರೋಪಿಗಳ ವಿರುದ್ಧ ಕೊಲೆ ಯತ್ನದ ಪ್ರರಕಣ ದಾಖಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com