ಸಾಮೂಹಿಕ ಶಿಕ್ಷಣ ಕಾರ್ಯಕ್ರಮಕ್ಕಾಗಿ ರಾಜ್ಯದ ಅನುದಾನದಲ್ಲಿ ಕಡಿತ; ಕೇಂದ್ರದ ವಿರುದ್ಧ ಸಚಿವ ತನ್ವೀರ್ ಸೇಠ್ ಆರೋಪ

ಸಾಮೂಹಿಕ ಶಿಕ್ಷಣ ಕಾರ್ಯಕ್ರಮಕ್ಕಾಗಿ ರಾಜ್ಯ ಸರ್ಕಾರಕ್ಕೆ ನೀಡಲಾಗುತ್ತಿರುವ ಅನುದಾನವನ್ನು ಕೇಂದ್ರ ಸರ್ಕಾರ ಕಡಿತಗೊಳಿಸುತ್ತಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ...
ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್
ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್
Updated on: 
ಬೆಂಗಳೂರು: ಸಾಮೂಹಿಕ ಶಿಕ್ಷಣ ಕಾರ್ಯಕ್ರಮಕ್ಕಾಗಿ ರಾಜ್ಯ ಸರ್ಕಾರಕ್ಕೆ ನೀಡಲಾಗುತ್ತಿರುವ ಅನುದಾನವನ್ನು ಕೇಂದ್ರ ಸರ್ಕಾರ ಕಡಿತಗೊಳಿಸುತ್ತಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ. 
ಸಾಕ್ಷರ ಭಾರತ್ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ ನಮಗೆ ರೂ.30 ಕೋಟಿ ಅನುದಾನ ನೀಡಬೇಕು. ದುರಾದೃಷ್ಚಕರವೆಂದರೆ ನಮಗೆ ರೂ.3.5 ಕೋಟಿಯನ್ನಷ್ಟೇ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ. 
ಅನುದಾನದ ಹಣದ ಕೊರತೆಯಿಂದಾಗಿ ಸಾಮೂಹಿಕ ಶಿಕ್ಷಣ ಕಾರ್ಯಕ್ರಮದ ಅಡಿಯಲ್ಲಿ ರಾಜ್ಯ ಸರ್ಕಾರದ ಯೋಜನೆಗಳ್ನು ಅನುಷ್ಠಾನಗೊಳಿಸುವಲ್ಲಿ ಸಮಸ್ಯೆಗಳು ಎದುರಾಗುತ್ತಿದೆ. ಹೀಗಾಗಿ ಪ್ರಾಥಮಿತ ಹಾಗೂ ಪ್ರೌಢಶಿಕ್ಷಣ ಮಂಡಳಿಯು ಇತರೆ ಇಲಾಖೆಗಳ ಸಹಾಯದ ಮೊರೆ ಹೋಗಿದೆ ಎಂದು ತಿಳಿಸಿದ್ದಾರೆ. 
ಸಾಕ್ಷರತೆಯ ಪ್ರಮಾಣವು ಕಾರ್ಮಿಕ ಇಲಾಖೆಯ ಅಡಿಯಲ್ಲಿದೆ. ಕೆಲ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಹಣಕಾಸಿನ ನೆರವಿಗಾಗಿ ಇಲಾಖೆಗೆ ಪ್ರಸ್ತಾಪಗಳನ್ನು ಸಲ್ಲಿಸಿದ್ದೇವೆ. 5 ವರ್ಷಗಳಾಕ ಶಿಕ್ಷಣ ಇಲಾಖೆಯೊಂದಿಗೆ ಕೆಲಸ ಮಾಡುವಂತೆ ಕಾರ್ಮಿಕ ಇಲಾಖೆ ಬಳಿ ಮನವಿ ಮಾಡಿೊಂಡಿದ್ದವೆ. ಹಣಕಾಸಿನ ಸಮಸ್ಯೆಗಳು ಎದುರಾದಾಗ ಯೋಜನೆಗಳನ್ನು ಹೇಗೆ ಅನುಷ್ಠಾನಕ್ಕೆ ತರಲಾಗುತ್ತದೆ?... ಪ್ರಸ್ತುತ ರಾಜ್ಯದ ಸಾಕ್ಷರತೆ ಪ್ರಮಾಣ ಶೇ.78.6ರಷ್ಟಿದೆ. ಸಾಕ್ಷರತೆ ಪ್ರಮಾಣವನ್ನು ಶೇ.100ಕ್ಕೆ ತರುವ ಸಲುವಾಗಿ ಸಾಮೂಹಿಕ ಶಿಕ್ಷಣ ಕಾರ್ಯಕ್ರಮಗಳನ್ನು ಆರಂಭಿಸಲಾಗಿದೆ ಎಂದಿದ್ದಾರೆ. 
ಪ್ರಸ್ತುತ ಎದುರಾಗಿರುವ ಸಮಸ್ಯೆ ಕುರಿತಂತೆ ಈಗಾಗಲೇ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರೊಂದಿಗೆ ಮಾತುಕತೆ ನಡೆಸಲಾಗಿದೆ. ಈ ವೇಳೆ ಸಚಿವರಿಂದ ಧನಾತ್ಮಕ ಪ್ರತಿಕ್ರಿಯೆಗಳು ಬಂದಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com