ಶಾಮನೂರು ಶಿವಶಂಕರಪ್ಪ
ಶಾಮನೂರು ಶಿವಶಂಕರಪ್ಪ

ಲಿಂಗಾಯಿತರಿಗೆ ಅಲ್ಪಸಂಖ್ಯಾತ ಸ್ಥಾನಮಾನ: ವೀರಶೈವ ಮಹಾಸಭಾದಿಂದ ಖಂಡನಾ ನಿರ್ಣಯ ಅಂಗೀಕಾರ

ಲಿಂಗಾಯಿತ, ವೀರಶೈವ ಸಮುದಾಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನಕ್ಕಾಗಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವ ರಾಜ್ಯ ಸಚಿವ ಸಂಪುಟದ ನಿರ್ಧಾರದ ವಿರುದ್ಧ ಅಖಿಲ ಭಾರತ ವೀರಶೈವ ಮಹಾಸಭಾದಿಂದ ಖಂಡನಾ ನಿರ್ಣಯ ಅಂಗೀಕರಿಸಲಾಗಿದೆ.

ಬೆಂಗಳೂರು : ಲಿಂಗಾಯಿತ, ವೀರಶೈವ ಸಮುದಾಯಕ್ಕೆ ಅಲ್ಪಸಂಖ್ಯಾತ ಸ್ಥಾನಮಾನಕ್ಕಾಗಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವ ರಾಜ್ಯ ಸಚಿವ ಸಂಪುಟದ ನಿರ್ಧಾರದ  ವಿರುದ್ಧ  ಅಖಿಲ ಭಾರತ ವೀರಶೈವ ಮಹಾಸಭಾದಿಂದ ಖಂಡನಾ ನಿರ್ಣಯ ಅಂಗೀಕರಿಸಲಾಗಿದೆ.

ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶ್ಯಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಇಂದು ಮಹಾಸಭಾದ ಕಾರ್ಯಕಾರಿ ಸಮಿತಿ ಸಭೆಯಲ್ಲಿ   ಸಚಿವ ಸಂಪುಟದ ನಿರ್ಧಾರಕ್ಕೆ ತೀವ್ರ ಖಂಡನೆ ವ್ಯಕ್ತವಾಯಿತು.

 ವೀರಶೈವ, ಲಿಂಗಾಯಿತ ಎರಡೂ ಒಂದೇ ಆಗಿದೆ. ಇದರಲ್ಲಿ ಯಾವುದೇ ವ್ಯತ್ಯಾಸ ಇಲ್ಲ.  ಬಸವ ತತ್ವವನ್ನು ಹೊಡೆಯುವುದು ಬೇಡ ಎಂದು ಇಂದಿನ ಸಭೆಯಲ್ಲಿ ಖಂಡನಾ ನಿರ್ಣಯ ಅಂಗೀಕರಿಸಲಾಗಿದೆ ಎಂದು ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ.

ವೀರಶೈವ ಹಾಗೂ ಲಿಂಗಾಯಿತ ಸಮುದಾಯಕ್ಕೆ ಪ್ರತ್ಯೇಕ ಧರ್ಮ ನೀಡಬೇಕೆಂದು ಮಹಾಸಭಾ ಮೊದಲಿನಿಂದಲೂ ಒತ್ತಾಯಿಸುತ್ತಾ ಬಂದಿದ್ದು, ಸಚಿವ ಸಂಪುಟ ಸಭೆಯಲ್ಲಿನ ನಿರ್ಧಾರವನ್ನು ಪುನರ್ ರಚಿಸುವಂತೆ ಒತ್ತಾಯಿಸಿದರು.

Related Stories

No stories found.

Advertisement

X
Kannada Prabha
www.kannadaprabha.com