ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ

ಮೋದಿ ಸರ್ಕಾರದ ಪ್ರಸ್ತಾವನೆ ವಿರೋಧಿಸುವ ಅಗತ್ಯವಿದೆ: ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸಿಎಂ ಸಿದ್ದರಾಮಯ್ಯ ಕರೆ

1971ರ ಜನಗಣತಿ ಬದಲಾಗಿ 2011ರ ಜನಗಣತಿಯ ವರದಿಯನ್ನು ಬಳಸಲು ಕೇಂದ್ರ ಸರ್ಕಾರ 15ನೇ ಹಣಕಾಸು ಆಯೋಗಕ್ಕೆ ಸೂಚನೆ ನೀಡಿದ್ದು, ಇದನ್ನು ವಿರೋಧಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ...
ಬೆಂಗಳೂರು: 1971ರ ಜನಗಣತಿ ಬದಲಾಗಿ 2011ರ ಜನಗಣತಿಯ ವರದಿಯನ್ನು ಬಳಸಲು ಕೇಂದ್ರ ಸರ್ಕಾರ 15ನೇ ಹಣಕಾಸು ಆಯೋಗಕ್ಕೆ ಸೂಚನೆ ನೀಡಿದ್ದು, ಇದನ್ನು ವಿರೋಧಿಸುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. 
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ತೆರಿಗೆ ವಿತರಣೆ ನಿರ್ಧರಿಸಲು 1971ರ ಜನಗಣತಿ ಬದಲಾಗಿ, 2011ರ ಜನಗಣತಿಯ ವರದಿಯನ್ನು ಬಳಸಲು ಕೇಂದ್ರ ಸರ್ಕಾರ 15ನೇ ಹಣಕಾಸು ಆಯೋಗಕ್ಕೆ ಸೂಚನೆ ನೀಡಿದೆ. ಇದು ದಕ್ಷಿಣ ರಾಜ್ಯಗಳ ಹಿತಾಸಕ್ತಿಗಳ ಮೇಲೆ ಗಂಭೀರ ಪರಿಣಾಮ ಬೀರಲಿದ್ದು, ಇದನ್ನು ನಾವು ವಿರೋಧಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.
ಈ ಕುರಿತ ಟ್ವೀಟ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಹಾಗೂ ಪಾಂಡಿಚೆರಿ ಮುಖ್ಯಮಂತ್ರಿಗಳಿಗೆ ಹಾಗೂ ಡಿಎಂಕೆ ನಾಯಕ ಎಂಕೆ. ಸ್ಟಾಲಿನ್ ಮತ್ತು ಕಾಂಗ್ರೆಸ್ ನಾಯಕ ಶಶಿ ತರೂರ್ ಅವರಿಗೆ ಟ್ಯಾಗ್ ಮಾಡಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com