ಮಾರ್ಚ್ 31ಕ್ಕೆ ಬೆಂಗಳೂರು ಕರಗ ಉತ್ಸವ

ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯುತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ಇದೇ 31ರಂದು ಉತ್ಸವ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯುತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ಇದೇ 31ರಂದು ಉತ್ಸವ ಜರಗಲಿದ್ದು ಏಪ್ರಿಲ್ 2ರವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.

ಮುಜರಾಯಿ ಇಲಾಖೆ ನೇಮಕ ಮಾಡಿರುವ 26 ವರ್ಷದ ಎನ್.ಮನು ಈ ಬಾರಿ ಹೂವಿನ ಕರಗ ಹೊರಲಿದ್ದಾರೆ.

ತಿಗಳರಪೇಟೆಯ ಧರ್ಮರಾಯಸ್ವಾಮಿ ದೇವಾಲಯದ ಆವರಣದಲ್ಲಿ ಬಿದಿರಿನ ಕಂಬದ ಮೇಲೆ ಧ್ವಜ ಹಾರಿಸುವ ಮೂಲಕ ನಿನ್ನೆ ರಾತ್ರಿ ಉತ್ಸವಕ್ಕೆ ಚಾಲನೆ ನೀಡಲಾಯಿತು.

ಇದೇ 31ರಂದು ಕರಗ ಶಕ್ತ್ಯೋತ್ಸವ, ಶ್ರೀ ಧರ್ಮರಾಯ ಸ್ವಾಮಿ ಮಹಾರಥೋತ್ಸವ ಮತ್ತು ಮತ್ಯಾಲಮ್ಮ ದೇವಿಯ ಉತ್ಸವ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅಭಿಷೇಕ, ಮಹಾಮಂಗಳಾರತಿ, ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com