ಕರುನಾಡ ಜಾಗೃತಿ ಯಾತ್ರೆ; 2 ದಿನ ರಾಜ್ಯಕ್ಕೆ ಅಮಿತ್ ಶಾ ಭೇಟಿ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಮಾ.26 ಮತ್ತು 29 ರಂದು ರಾಜ್ಯಕ್ಕೆ ಎರಡು ದಿನಗಳ ಕಾಲ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ...
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ
ದಾವಣಗೆರೆ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಮಾ.26 ಮತ್ತು 29 ರಂದು ರಾಜ್ಯಕ್ಕೆ ಎರಡು ದಿನಗಳ ಕಾಲ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ. 
ಕರುನಾಡ ಜಾಗೃತಿ ಯಾತ್ರೆ ಹೆಸರಿನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಅಮಿತ್ ಶಾ ಅವರು ಪಾಲ್ಗೊಳ್ಳಲಿದ್ದಾರೆಂದು ವರದಿಗಳು ತಿಳಿಸಿವೆ. 
ತುಮಕೂರು, ಚಿತ್ರದುರ್ಗ, ಶಿವಮೊಗ್ಗ, ಮೈಸೂರು ಮಂಡ್ಯ ಹಾಗೂ ಚಾಮರಾಜನಗರ ಸೇರಿದಂತೆ ಇತರೆ ಭಾಗಗಳಲ್ಲಿ ಅಮಿತ್ ಶಾ ಪ್ರವಾಸ ಕೈಗೊಂಡಿದ್ದಾರೆ.
ಸೋಮವಾರ ತುಮಕೂರಿಗೆ ಆಗಮಿಸಿರುವ ಅಮಿತ್ ಶಾ ಅವರು ನಂತರ ಡಾ.ಶಿವಕುಮಾರ ಸ್ವಾಮೀಜಿಗಳ ಆಶೀರ್ವಾದ ಪಡೆಯುವ ಸಲುವಾಗಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ತಿಪಟೂರಿನಲ್ಲಿ ಆಯೋಜಿಸಿರುವ ತೆಂಗು ಬೆಳಗಾರರ ಸಮಾವೇಶದಲ್ಲಿ ಭಾಗಿಯಾಗಿ ನಂತರ ರಾಷ್ಟ್ರಕವಿ ಕುವೆಂಪು ಅವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆಂದು ಮಾಜಿ ಎಂಎಲ್'ಸಿ ಹೆಚ್ ಶಿವಯೋಗಿಸ್ವಾಮಿಯವರು ಹೇಳಿದ್ದಾರೆ. 
ತೀರ್ಥಹಳ್ಳಿಯಲ್ಲಿ ಅಡಕೆ ಬೆಳೆಗಾರರ ಜೊತೆಗೆ ಸಂವಾದ ನಡೆಸಲಿರುವ ಅಮಿತ್ ಶಾ ಅವರು, ಮಂಗಳವಾರ ಚಳ್ಳಕೆರೆಯಲ್ಲಿ ಪರಿಶಿಷ್ಟ ಪಂಗಡಗಳ ಸಮಾವೇಶದಲ್ಲಿ ಪಾಲ್ಗೊಳ್ಳುವರು. ಅದೇ ದಿನ ದಾವಣಗೆರೆ ಜಿಲ್ಲೆಯ ದೊಡ್ಡಬಾತಿಯಲ್ಲಿ ನಿಗದಿಯಾಗಿರುವ ಮುಷ್ಠಿ ಧಾನ್ಯ ಅಭಿಯಾನದಲ್ಲಿ ಭಾಗವಹಿಸಿ ರೈತರ ಸಭೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಐವರು ರೈತರ ಮನೆಗೆ ಭೇಟಿ ನೀಡಿ ರೈತರ ಮುಷ್ಠಿಯಿಂದ ಅಕ್ಕಿಯನ್ನು ಪಡೆಯಲಿದ್ದಾರೆ. ಅಮಿತ್ ಶಾ ಅವರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಕೂಡ ಸಾಥ್ ನೀಡಲಿದ್ದಾರೆ. ಬಳಿಕ ಯಡಿಯೂರಪ್ಪ ಅವರು ರೈತರ ಕುರಿತ ಪತ್ರಗಳನ್ನು ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಕರಣಗಳ ಪಟ್ಟಿಯನ್ನು ಅಮಿತಾ ಶಾ ಅವರಿಗೆ ನೀಡಲಿದ್ದಾರೆ. 
ಬಳಿಕ ಜಿಎಂಐ ಕಾನ್ಫರೆನ್ಸ್ ಹಾಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿರುವ ಅವರು ನಂತರ ಶೃಂಗೇರಿಗೆ ತೆರಳುವ ಅವರು ತರಲಬಲು ಮಠ, ಮುರುಗಮಠ ಮತ್ತು ಮಾದರಾಚಂಯ್ಯ ಮಠಕ್ಕೆ ಭೇಟಿ ನೀಡಲಿದ್ದಾರೆಂದು ಶಿವಯೋಗಿ ಸ್ವಾಮಿ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com