ಕಾವೇರಿ ಜಲ ವಿವಾದ ಪರಿಹರಿಸಲು ಸಮಿತಿ ರಚನೆಗೆ ಕರ್ನಾಟಕ ಒಲವು

ಅಂತರಾಜ್ಯ ನದಿ ನೀರು ಹಂಚಿಕೆ ವಿವಾದದಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ಕಾವೇರಿ ನಿರ್ವಹಣಾ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ಅಂತರಾಜ್ಯ ನದಿ ನೀರು ಹಂಚಿಕೆ ವಿವಾದದಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸಲು ಕರ್ನಾಟಕ ಸರ್ಕಾರ ತನ್ನ ವಿರೋಧವನ್ನು ಮತ್ತೆ ಪುನರುಚ್ಛರಿಸಿದೆ. ಇದರ ಬದಲಾಗಿ ಕಾವೇರಿ ನಿರ್ಣಯ ಜಾರಿ ಸಮಿತಿಯನ್ನು ರಚಿಸಲು ರಾಜ್ಯ ಸರ್ಕಾರ ಸಲಹೆ ನೀಡಿದೆ.

ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ತಮಿಳುನಾಡು ಸರ್ಕಾರ ಒತ್ತಾಯಿಸುತ್ತಿದೆ. ಅಂತರಾಜ್ಯ ನದಿ ನೀರು ಹಂಚಿಕೆ ಯೋಜನೆಯಲ್ಲಿ ಕಾವೇರಿ ನಿರ್ವಹಣಾ ಮಂಡಳಿ ಭಾಗವಾಗಬೇಕೆಂಬ ತಮಿಳುನಾಡು ಮುಖ್ಯ ಕಾರ್ಯದರ್ಶಿಗಳ ಒತ್ತಾಯ ಕಾನೂನು ಮತ್ತು ತೀರ್ಪಿಗೆ ವಿರುದ್ದವಾಗಿದೆ ಎಂದು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಕೇಂದ್ರ ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಯು.ಪಿ.ಸಿಂಗ್ ಗೆ ಬರೆದಿರುವ ಪತ್ರದಲ್ಲಿ ನಮೂದಿಸಿದ್ದಾರೆ.

ಕಾವೇರಿ ನದಿ ನೀರು ಹಂಚಿಕೆ ವಿವಾದ ಕುರಿತಂತೆ ಕೇಂದ್ರ ಸರ್ಕಾರ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೆರಿ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳ ಸಭೆ ನಡೆಸಿ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಲು ಇರುವ ಕಾರ್ಯವಿಧಾನಗಳು ಮತ್ತು ನಾಲ್ಕೂ ರಾಜ್ಯಗಳ ಸರ್ಕಾರಗಳ ಅಭಿಪ್ರಾಯಗಳನ್ನು ಕೇಳಿತ್ತು. ಈ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸಿರುವ ಕರ್ನಾಟಕ ಸರ್ಕಾರ ಕೇಂದ್ರ ಸರ್ಕಾರ ರಚಿಸುವ ಯಾವುದೇ ಪ್ರಾಧಿಕಾರ ವಿವಾದ ಬಗೆಹರಿಸಲು ಮಾತ್ರ ಸಾಧ್ಯವಿದೆ ಎಂದು ಮತ್ತು ಮುಖ್ಯ ಕಾರ್ಯದರ್ಶಿಗಳು ಬರೆದಿರುವ ಪತ್ರದಲ್ಲಿ ಕೇಂದ್ರ ಸರ್ಕಾರದ ನಿರ್ಧಾರವನ್ನು ಪರಿಗಣಿಸಲು ರಾಜ್ಯ ಸರ್ಕಾರ ಯೋಜನೆಯೊಂದನ್ನು ಆರಂಭಿಸಿದೆ ಎಂದು ಹೇಳಿದೆ.

ಮುಖ್ಯ ಕಾರ್ಯದರ್ಶಿಗಳು ಕೇಂದ್ರಕ್ಕೆ ಬರೆದಿರುವ ಪತ್ರದಲ್ಲಿ ಕರ್ನಾಟಕ ಯೋಜನೆ ಆರಂಭಕ್ಕೆ ಸಿದ್ಧವಾಗಿದೆ ಎಂದು ಹೇಳಿದ್ದಾರೆ. ನಮ್ಮ ಸಲಹಾ ಯೋಜನೆಯಂತೆ ಸುಪ್ರೀಂ ಕೋರ್ಟ್ ನ ಆದೇಶವನ್ನು ಪಾಲಿಸಲು ಸಮಿತಿಯಿಂದ ಸಾಧ್ಯತೆಯಿದ್ದು ಬರಗಾಲ ಸಂದರ್ಭದಲ್ಲಿ ನೀರು ಹಂಚಿಕೆ ಮಾಡಲು ಸಮಿತಿ ಬದ್ಧವಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com