ಮಂಗಳೂರು : ಬರ್ತ್ ಡೇ ಆಚರಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಿಂದೂ ಪರ ಕಾರ್ಯಕರ್ತರಿಂದ ದಾಳಿ

ತಣ್ಣೀರಬಾವಿ ಬೀಚ್ ಬಳಿ ಹುಟ್ಟುಹಬ್ಬ ಸಂಭ್ರಮಾಚರಣೆಯಲ್ಲಿ ತೊಡಗಿದ ವಿವಿಧ ಧರ್ಮಗಳಿಗೆ ಸೇರಿದ ವಿದ್ಯಾರ್ಥಿಗಳ ಮೇಲೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಮಂಗಳೂರು : ತಣ್ಣೀರಬಾವಿ ಬೀಚ್ ಬಳಿ ಹುಟ್ಟುಹಬ್ಬ ಸಂಭ್ರಮಾಚರಣೆಯಲ್ಲಿ ತೊಡಗಿದ್ದ ವಿವಿಧ ಧರ್ಮಗಳಿಗೆ ಸೇರಿದ ವಿದ್ಯಾರ್ಥಿಗಳ ಮೇಲೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.

ನಿನ್ನೆ ಬೆಳಿಗ್ಗೆ ಈ ಘಟನೆ ನಡೆದಿದ್ದು, ಹಿಂದೂಪರ ಸಂಘಟನೆಯ ಕಾರ್ಯಕರ್ತರು ಎನ್ನಲಾದ ಸುಕೇಶ್, ವರುಣ್, ಮತ್ತು ದೀಕ್ಷಿತ್ ಎಂಬವರನ್ನು  ಬಂಧಿಸಲಾಗಿದೆ ಎಂದು ಪೆಣಂಬೂರು ಸಬ್ ಇನ್ಸ್ ಪೆಕ್ಟರ್  ವೆಂಕಟೇಶ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಲ್ಯಾಟ್ ಟೆಕ್ನಿಷೀಯನ್ ಕೋರ್ಸ್ ಮಾಡುತ್ತಿದ್ದ ಐದು ಮಂದಿ ವಿದ್ಯಾರ್ಥಿಗಳು ಶನಿವಾರ ರಾತ್ರಿ  ಬೀಚ್ ನಲ್ಲಿ ವಿದ್ಯಾರ್ಥಿನಿಯೊಬ್ಬಳ ಹುಟ್ಟಹಬ್ಬದ ಸಂಭ್ರಮಾಚರಣೆಯಲ್ಲಿ ತೊಡಗಿದ್ದರು. ಈ ವೇಳೆ ಅಲ್ಲಿಗೆ ಬಂದ ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ, ಅಲ್ಲಿದ್ದ ವಿದ್ಯಾರ್ಥಿ ಮೇಲೆ ದಾಳಿ ನಡೆಸಿ ಪೋನ್ ಕಿತ್ತುಕೊಂಡಿದ್ದರು.

ನಂತರ ಸ್ಥಳೀಯ ಆಸ್ಪತ್ರೆಗೆ ಆ ವಿದ್ಯಾರ್ಥಿಯನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಸಂತ್ರಸ್ತರು ನೀಡಿದ ಹೇಳಿಕೆ ಆಧಾರದ ಮೇಲೆ ಪೊಲೀಸರು ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ.

ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ನಂತರ ವಶಕ್ಕೆ ತೆಗೆದುಕೊಂಡಿರುವ  ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಈ ಮಧ್ಯೆ ಆ ವಿದ್ಯಾರ್ಥಿಗಳು ಅನುಚಿತವಾಗಿ ವರ್ತಿಸುತ್ತಿದ್ದರು  ಎಂದು ಆರೋಪಿಸಿ ಆರೋಪಿಗಳ ಪೋಷಕರು ಠಾಣೆಗೆ ದೂರು  ಸಲ್ಲಿಸಿದ್ದಾರೆ.



Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com