ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್: ಮೇ12 ರಂದು ಮತದಾನ

ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮೇ 12ರಂದು ಮತದಾನ ನಡೆಯಲಿದೆ.
ನವದೆಹಲಿ: ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮೇ 12ರಂದು ಮತದಾನ ನಡೆಯಲಿದೆ.
ಈ ಬಗ್ಗೆ ಇಂದು ದೆಹಲಿಯಲ್ಲಿ ಮುಖ್ಯ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ. 12ರಂದು ಮತದಾನ ನಡೆಯಲಿದ್ದು, ಮೇ 15ರಂದು ಮತಎಣಿಕೆ ಕಾರ್ಯ ನಡೆಯಲಿದೆ. 
ಏಪ್ರಿಲ್ 17ರದು ಅಧಿಸೂಚನೆ ಪ್ರಕಟವಾಗಲಿದ್ದು, ಅಂದಿನಿಂದಲೇ ನಾಮಪತ್ರ  ಸಲ್ಲಿಕೆ ಆರಂಭವಾಗುತ್ತದೆ. ಏಪ್ರಿಲ್ 24ರಂದು ನಾಮಪತ್ರ ಸಲ್ಲಿಕೆ ಕೊನೆಯ ದಿನವಾಗಿದ್ದು, ಏಪ್ರಿಲ್ 25ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏಪ್ರಿಲ್ 27ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ ಎಂದು ತಿಳಿದುಬಂದಿದೆ.
ಒಟ್ಟು 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಒಟ್ಟು 4 ಕೋಟಿ 96 ಲಕ್ಷ ಮತದಾರಿದ್ದಾರೆ. ಅವರಲ್ಲಿ 2 ಕೋಟಿ 51 ಲಕ್ಷ ಪುರುಷ ಮತದಾರಿದ್ದರೆ, 2 ಕೋಟಿ 44 ಲಕ್ಷ ಮಹಿಳಾ ಮತದಾರರಿದ್ದಾರೆ. ಕನ್ನಡ, ಇಂಗ್ಲಿಷ್​ನಲ್ಲಿ ಮತದಾರರ ಚೀಟಿ ಇರುತ್ತದೆ ಎಂದು ರಾವತ್​ ತಿಳಿಸಿದರು.
ರಾಜ್ಯದಲ್ಲಿ ಒಟ್ಟು  4,96. 357 ಕೋಟಿ ಮತದಾರರಿದ್ದಾರೆ. ಒಂದೇ ಒಂದು ಹಂತದ ಮತದಾನ ಇಲ್ಲಿ ನಡೆಯಲಿದ್ದು, 56,000 ಮತಗಟ್ಟೆಗಳಿರಲಿವೆ. ಈ ಬಾರಿ ಇವಿಎಂ ಜತೆ ವಿವಿ ಪ್ಯಾಟ್ (ಮತ ಖಾತರಿ ಯಂತ್ರ) ಇರಲಿದೆ. ಮತಗಟ್ಟೆಗಳಲ್ಲಿ ಅಂಗವಿಕಲರಿಗೆ ವಿಶೇಷ ಸೌಲಭ್ಯವಿರಲಿದೆ. 

ಪಕ್ಷಗಳ ಚುನಾವಣಾ ವೆಚ್ಚಕ್ಕೆ ಯಾವುದೇ ಮಿತಿಯಿರುವುದಿಲ್ಲ, ಆದರೆ ಅಭ್ಯರ್ಥಿಯೊಬ್ಬರ ಚುನಾವಣಾ ವೆಚ್ಚ  ₹28 ಲಕ್ಷಕ್ಕೆ ಸೀಮಿತಗೊಳಿಸಲಾಗಿದೆ. ಈಗಿರುವ 224 ಸದಸ್ಯರ ಕರ್ನಾಟಕ ವಿಧಾನಸಭೆಯ ಕಾಲಾವಧಿ ಮೇ 28ರಂದು ಅಂತ್ಯಗೊಳ್ಳಲಿದೆ. ಮೇ ತಿಂಗಳು ಮುಗಿಯುವುದರೊಳಗೆ ಕರ್ನಾಟಕದಲ್ಲಿ ಚುನಾವಣಾ ಪ್ರಕ್ರಿಯೆಗಳು ಪೂರ್ತಿಗೊಳ್ಳಬೇಕಿದೆ.

Related Stories

No stories found.

Advertisement

X
Kannada Prabha
www.kannadaprabha.com