ಕರ್ನಾಟಕ ವಿಧಾನಸಭಾ ಚುನಾವಣೆ: ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ವಿವಿಪ್ಯಾಟ್ ಬಳಕೆ!

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಮತದಾನದ ವೇಳೆ ವಿವಿಪ್ಯಾಟ್ ಬಳಕೆ ಮಾಡುವ ಕುರಿತು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ.
ವಿವಿ ಪ್ಯಾಟ್ (ಸಂಗ್ರಹ ಚಿತ್ರ)
ವಿವಿ ಪ್ಯಾಟ್ (ಸಂಗ್ರಹ ಚಿತ್ರ)
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಮತದಾನದ ವೇಳೆ ವಿವಿಪ್ಯಾಟ್ ಬಳಕೆ ಮಾಡುವ ಕುರಿತು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ.
ದೆಹಲಿಯಲ್ಲಿ ಈ ಬಗ್ಗೆ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಚುನಾವಣಾ ಆಯೋಗದ  ಮುಖ್ಯಸ್ಥ ಒಪಿ ರಾವತ್ ಅವರು, ಈ ಬಾರಿ ಇವಿಎಂ ಜತೆ ವಿವಿ ಪ್ಯಾಟ್ (ಮತ ಖಾತರಿ ಯಂತ್ರ) ಇರಲಿದೆ. ಮತಗಟ್ಟೆಗಳಲ್ಲಿ ಅಂಗವಿಕಲರಿಗೆ ವಿಶೇಷ ಸೌಲಭ್ಯವಿರಲಿದೆ ಎಂದು ಹೇಳಿದರು.
ಅಂತೆಯೇ ಮತದಾನದ ಅವಧಿಯನ್ನು ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಬೆಳಗ್ಗೆ7 ರಿಂದ ಸಂಜೆ 5 ರರೆಗೆ ಮಾತ್ರ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು. 
ವಿದ್ಯುನ್ಮಾನ ಮತಯಂತ್ರಗಳ ಬಗೆಗಿನ ಸಂದೇಹ ನಿವಾರಿಸುವ ಸಲುವಾಗಿ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ವಿವಿಪ್ಯಾಟ್ ಗಳನ್ನು ಮತಗಟ್ಟೆಗಳಲ್ಲಿ ಅಳವಡಿಸಲಾಗುತ್ತಿದೆ. ಇದರಿಂದ ಮತದಾರರು ಚಲಾಯಿಸಿದ ಮತವು ಯಾವ ಅಭ್ಯರ್ಥಿ ಮತ್ತು ಚಿಹ್ನೆಗೆ ಚಲಾವಣೆ ಆಗಿದೆ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕಾಗಿದೆ. ಮತದಾರರು ಚಲಾಯಿಸಿದ ಮತವು ಯಾವ ಅಭ್ಯರ್ಥಿ ಮತ್ತು ಚಿಹ್ನೆಗೆ ಚಲಾವಣೆ ಆಗಿದೆ ಎಂಬುದು ವಿವಿಪ್ಯಾಟ್ ಮುದ್ರಿತ ಪತ್ರಿಕೆಯಲ್ಲಿ ಕಾಣಲಿದೆ. 15 ಸೆಕೆಂಡುಗಳವರೆಗೆ ವೀಕ್ಷಣೆಗೆ ಲಭ್ಯವಿರಲಿದೆ. ಹೀಗಾಗಿ, ಮತದಾನದ ಅವಧಿಯನ್ನು ಒಂದು ಗಂಟೆ ಹೆಚ್ಚಿಸಲಾಗಿದೆ. ಮತದಾರರು ವಿವಿಪ್ಯಾಟ್ ನಲ್ಲಿ ಮುದ್ರಿತವಾಗುವ ಪ್ರತಿಯನ್ನು ಪಡೆಯಲು ಅವಕಾಶವಿರುವುದಿಲ್ಲ.
ಏನಿದು ವಿವಿ ಪ್ಯಾಟ್? 
ಮತದಾರ ತಾನು ಆಯ್ಕೆ ಮಾಡಬೇಕಿರುವ ವ್ಯಕ್ತಿಯ ಹೆಸರಿನ ಮುಂದಿನ ಗುಂಡಿ ಒತ್ತಿದರೆ ಸಾಕು ಮತಯಂತ್ರದ ಪಕ್ಕದಲ್ಲಿಯೇ ಇಡಲಾಗುವ ಮತ ಖಾತರಿಪಡಿಸುವ ವೋಟರ್‌ ವೆರಿಫೈಡ್‌ ಪೇಪರ್‌ ಆಡಿಟ್‌ (ವಿವಿ ಪ್ಯಾಟ್) ಯಂತ್ರದಲ್ಲಿ ನಾವು ಮತ ಹಾಕಿದ ಅಭ್ಯರ್ಥಿಯ ಹೆಸರಿನಲ್ಲಿ ಪ್ರಿಂಟ್ ಆದ ಚೀಟಿ ಮತದಾನದ ಪೆಟ್ಟಿಗೆಯಲ್ಲಿ ಬೀಳುತ್ತದೆ. ಆಗ ಮತದಾರ ತಾನು ಚಲಾಯಿಸಿದ ಮತ ಸರಿಯಾಗಿದೆಯೇ ಎನ್ನುವುದನ್ನು ಖಚಿತ ಪಡಿಸಿಕೊಳ್ಳಬಹುದು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com