ಹೊಸ ಸರ್ಕಾರ ರಚನೆಗೊಂಡ ಬಳಿಕ ಬೆಂಗಳೂರು, ಮೈಸೂರು ವಿವಿಗಳಿಗೆ ಉಪ ಕುಲಪತಿಗಳ ನೇಮಕ

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಈಗಾಗಲೇ ಕೇಂದ್ರ ಚುನಾವಣಾ ಆಯೋಗ ನೀತಿ ಸಂಹಿತೆಯನ್ನು ಜಾರಿ ಮಾಡಿದೆ. ಈ ಹಿನ್ನಲೆಯಲ್ಲಿ ಹೊಸ ಸರ್ಕಾರ ರಚನೆಗೊಳ್ಳುವವರೆಗೂ ಬೆಂಗಳೂರು...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಈಗಾಗಲೇ ಕೇಂದ್ರ ಚುನಾವಣಾ ಆಯೋಗ ನೀತಿ ಸಂಹಿತೆಯನ್ನು ಜಾರಿ ಮಾಡಿದೆ. ಈ ಹಿನ್ನಲೆಯಲ್ಲಿ ಹೊಸ ಸರ್ಕಾರ ರಚನೆಗೊಳ್ಳುವವರೆಗೂ ಬೆಂಗಳೂರು ಹಾಗೂ ಮೈಸೂರು ವಿಶ್ವವಿದ್ಯಾಲಯಗಳು ಉಪ ಕುಲಪತಿಗಳ ನೇಮಕಕ್ಕಾಗಿ ಕಾಯಬೇಕಿದೆ. 
ರಾಜ್ಯದಲ್ಲಿ ಚುನಾವಣಾ ಆಯೋಗ ನೀತಿ ಸಂಹಿತೆ ಜಾರಿ ಮಾಡಿರುವುದರಿಂದ ಪ್ರಸ್ತುತ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಯಾವುದೇ ರೀತಿಯ ಕಡತಗಳನ್ನು, ನಿರ್ಧಾರಗಳನ್ನು ಕೈಗೊಳ್ಳುವಂತಿಲ್ಲ. ಹೀಗಾಗಿ ಉಪ ಕಲುಪತಿಗಳ ನೇಮಕ ಕುರಿತ ಕಡತವನ್ನು ರಾಜ್ಯಪಾಲರಿಗೆ ಸಲ್ಲಿಸಲು ಸಾಧ್ಯವಿಲ್ಲ. 
ಬೆಂಗಳೂರು ಹಾಗೂ ಮೈಸೂರು ವಿಶ್ವವಿದ್ಯಾಲಯಗಳು ಕುಲಪತಿಗಳ ನೇಮಕ್ಕಾಗಿ 1 ವರ್ಷಗಳ ಕಾಲ ಕಾದು ಕುಳಿತಿದೆ. ಇದೀಗ ಚುನಾವಣೆ ಹತ್ತಿರ ಬಂದಿರುವ ಹಿನ್ನಲೆಯಲ್ಲಿ ಹೊಸ ಸರ್ಕಾರ ರಚನೆಗೊಳ್ಳುವವರೆಗೂ ಕಾಯಬೇಕಿದೆ. 
ಮೂಲಗಳ ಪ್ರಕಾರ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗುವುದಕ್ಕೂ ಮುನ್ನ ಒಂದು ಹಿಂದೆಯೇ ಸರ್ಕಾರ ವಿಶ್ವವಿದ್ಯಾಲಯದ ಕುಲಪತಿಗಳ ನೇಮಕ ಕುರಿತ ಕಡತವನ್ನು ರಾಜ್ಯಪಾಲರಿಗೆ ಕಳುಹಿಸಿಕೊಟ್ಟಿತ್ತು. ಆದರೆ, ಆ ಕಡತಗಳನ್ನು ರಾಜ್ಯಪಾಲರು ಹಿಂದಕ್ಕೆ ಕಳುಹಿಸಿದ್ದರು ಎಂದು ಹೇಳಲಾಗುತ್ತಿದೆ. 
ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಕಡತವನ್ನು ರಾಜ್ಯಪಾಲರು ಯಾವ ಕಾರಣಕ್ಕೆ ಹಿಂದಕ್ಕೆ ಕಳುಹಿಸಿದರು ಎಂಬುದು ತಿಳಿಯುತ್ತಿಲ್ಲ. ಆದರೆ, ಎರಡು ವಿಶ್ವವಿದ್ಯಾಲಯಗಳಿಗೆ ಕುಲಪತಿಗಳ ನೇಮಕ ಕುರಿತು ಆದೇಶ ನೀಡಿದ್ದಾರೆಂದು ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದೆ. 
ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಉಪ ಕುಲಪತಿ ಡಾ.ಎಂ.ಎಸ್ ತಿಮ್ಮಪ್ಪ ಅವರು ಮಾತನಾಡಿ, ಸರ್ಕಾರ ವಿಶ್ವವಿದ್ಯಾಲಯಕ್ಕೆಅಧಿಕಾರಿಗಳನ್ನು ನೇಮಕಮಕಾಡುತ್ತಿದೆ. ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಕಡತವನ್ನು ಈಗಾಗಲೇ ಸರ್ಕಾರ ರಾಜ್ಯಪಾಲರಿಗೆ ಹಸ್ತಾಂತರಿಸಿದೆ. ಕುಲಪತಿಗಳನ್ನು ರಾಜ್ಯಾಪಾಲರು ನೇಮಕ ಮಾಡಬೇಕು. ಇದಕ್ಕೆ ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ. 
ಸರ್ಕಾರದ ಶಿಫಾರಸಿಗೆ ರಾಜ್ಯಪಾಲರು ಅಸಮಾಧಾನ
ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಉಪ ಕುಲಪತಿಗಳ ನೇಮಕಕ್ಕೆ ಸರ್ಕಾರ ಶಿಫಾರಸು ಮಾಡಿರುವ ಹೆಸರುಗಳಿಗೆ ರಾಜ್ಯಪಾಲರು ಅಸಮಾಧಾನಗೊಂಡಿದ್ದಾರೆಂದು ಹೇಳಲಾಗುತ್ತಿದೆ. 
ಕೆಲ ದಿನಗಳ ಹಿಂದಷ್ಟೇ ಸ್ವತಃ ರಾಜ್ಯಪಾಲರೇ ಕುಲಪತಿಗಳ ನೇಮಕ ಕುರಿತ ಪಟ್ಟಿಯನ್ನು ಕಳುಹಿಸಿಕೊಡುವಂತೆ ಹೆಚ್ಚುವರಿ ಶಿಕ್ಷಣ ಇಲಾಖೆಗೆ ಸೂಚಿಸಿದ್ದರು. ಕುಲಪತಿಗಳ ನೇಮಕಕ್ಕೆ ಸರ್ಕಾರ ಶಿಫಾರಸು ಮಾಡಿರುವ ಪಟ್ಟಿಯನ್ನು ನೋಡಿದ ಬಳಿಕ ರಾಜ್ಯಪಾಲರು ಅಸಮಾಧಾನಗೊಂಡಿದ್ದಾರೆಂದು ಹೇಳಲಾಗುತ್ತಿದೆ. ಕಡತವನ್ನು ಹಿಂದಕ್ಕೆ ಕಳುಹಿಸಲಲು ಇದೇ ಕಾರಣ. ಇದೀಗ ಈ ಸಂಬಂಧ ರಾಜ್ಯಪಾಲರು ಕಾನೂನಾತ್ಮಕ ಅಭಿಪ್ರಾಯಗಳನ್ನು ಪಡೆದುಕೊಳ್ಳುತ್ತಿದ್ದಾರೆಂದು ರಾಜಭವನದ ಮೂಲಗಳು ಮಾಹಿತಿ ನೀಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com