ಉಪನ್ಯಾಸಕರ ನಿವೃತ್ತಿ ವಯಸ್ಸು ಏರಿಸಲು ರಾಜ್ಯ ಸರ್ಕಾರ ಚಿಂತನೆ

ಕಾಲೇಜು ಶಿಕ್ಷಣ ಮತ್ತು ವಿಶ್ವವಿದ್ಯಾಲಯಗಳ ಬೋಧಕರ ನಿವೃತ್ತಿ ವಯಸ್ಸನ್ನು ಹೆಚ್ಚಸಲು ಉನ್ನತ ಶಿಕ್ಷಣ ಇಲಾಖೆ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಕಾಲೇಜು ಶಿಕ್ಷಣ ಮತ್ತು ವಿಶ್ವವಿದ್ಯಾಲಯಗಳ ಬೋಧಕರ ನಿವೃತ್ತಿ ವಯಸ್ಸನ್ನು ಹೆಚ್ಚಸಲು ಉನ್ನತ ಶಿಕ್ಷಣ ಇಲಾಖೆ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. 
ಉಪನ್ಯಾಸಕರ ನಿವೃತ್ತಿ ವಯಸ್ಸನ್ನು ಏರಿಕೆ ಮಾಡಬೇಕೆಂದು ಕೋರಿ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ಉಪನ್ಯಾಸಕರು, ದೈಹಿಕ ಶಿಕ್ಷಣ ಮಹಾವಿದ್ಯಾಲಯಗಳ ನಿರ್ದೇಶಕರ ಸಂಘಟನೆಗಳು ಸಲ್ಲಿಸಿದ್ದ ಮನವಿಯನ್ನು ಪರಿಶೀಲಿನೆ ನಡೆಸಿರುವ ಉನ್ನತ ಶಿಕ್ಷಣ ಇಲಾಖೆ, ಉಪನ್ಯಾಸಕರ ನಿವೃತ್ತಿ ವಯಸ್ಸನ್ನು ಹೆಚ್ಚಿಸಲು ಕಾಲೇಜು ಶಿಕ್ಷಣ ಇಲಾಖೆಯಿಂದ ಮಾಹಿತಿ ಕೇಳಿ ಪತ್ರವೊಂದರನ್ನು ಬರೆದಿದೆ ಎಂದು ಹೇಳಲಾಗುತ್ತಿದೆ. 
ಉಪನ್ಯಾಸಕರ ನಿವೃತ್ತಿ ವಯಸ್ಸನ್ನು ಹೆಚ್ಚಿಸುವ ಕುರಿತಂತೆ ಸಲ್ಲಿಕೆಯಾಗಿದ್ದ ಮನವಿಯನ್ನು ಈ ಹಿಂದೆ ಆರ್ಥಿಕ ಇಲಾಖೆ ತಿರಸ್ಕರಿಸಿತ್ತು. ಆದರೂ, ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರು ಮತ್ತು ಬೆಂಗಳೂರು ಸೇರಿದಂತೆ ಒಟ್ಟು 16 ವಿಶ್ವವಿದ್ಯಾಲಯಗಳ ಕುಲಸಚಿವರಿಗೆ ಈ ಸಂಬಂಧ 2018ರ ಮಾ.22 ರಂದು ಪತ್ರ ಬರೆಯಲಾಗಿದೆ ಎನ್ನಲಾಗುತ್ತಿದೆ. 
ಪ್ರಸ್ತುತ ವಿಶ್ವವಿದ್ಯಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ ಸಿಬ್ಬಂದಿಯ ನಿವೃತ್ತಿ ವಯಸ್ಸು 60 ರಿಂದ 60 ಇದ್ದು, ಇದನ್ನು 62-64ಕ್ಕೆ ಹೆಚ್ಚಿಸುವ ಸಂಬಂಧ ಮಾಹಿತಿ ಕೋರಿ ಪತ್ರ ಬರೆದಿದೆ, ಅಲ್ಲದೆ, ಪ್ರಸಕ್ತ ಸಾಲಿನಲ್ಲಿ ನಿವೃತ್ತಿ ವಯಸ್ಸನ್ನು ಹೆಚ್ಚಿಸಿದಲ್ಲಿ ಉಂಟಾಗುವ ಆರ್ಥಿಕ ಹೊರೆ ಕುರಿತೂ ಮಾಹಿತಿ ಕೇಳಿದೆ. 
ಶಿಕ್ಷಣ ಇಲಾಖೆ ಈ ನಿರ್ಧಾರಕ್ಕೆ ಸ್ವಾತಕೋತ್ತರ ಪದವಿ ಪಡೆದ ನಿರುದ್ಯೋಗಿಗಳು ಹಾಗೂ ಅತಿಥಿ ಉಪನ್ಯಾಸಕ ವಲಯದಲ್ಲಿ ಆತಂಕ ಹೆಚ್ಚಿಸಿದ್ದು, ಇಲಾಖೆ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸುತ್ತಿವೆ. 
ಸರ್ಕಾರದ ನಿರ್ಧಾರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಬೆಂಗಳೂರು ವಿಶ್ವವಿದ್ಯಾಲಯ ಮಾಜಿ ಉಪ ಕುಲಪತಿಗಳು, ಇದರ ಬದಲು ಅರ್ಹರಾಗಿರುವ ಯುವಕರಿಗೆ ಉದ್ಯೋಗ ನೀಡುವತ್ತ ಸರ್ಕಾರ ಗಮನಹರಿಸಬೇಕಿದೆ. ಉಪನ್ಯಾಸಕರ ನಿವೃತ್ತಿ ವಯಸ್ಸನ್ನೇಕೆ ಹೆಚ್ಚಿಸಲು ಸರ್ಕಾರ ಮುಂದಾಗಿದೆ ಎಂಬುದು ಆಶ್ಚರ್ಯವನ್ನುಂಟು ಮಾಡಿದೆ ಎಂದು ಹೇಳಿದ್ದಾರೆ. 
ಸರ್ಕಾರದ ನಿರ್ಧಾರ ಯುವಕರಿಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಬೆನಕಾ ರಾಜು ಎಂಬುವವರು ಹೇಳಿದ್ದಾರೆ. 
ಇಲಾಖೆಯ ಅಧಿಕಾರಿಗಳು ಮಾತನಾಡಿ, ಈ ಶಿಫಾರಸು ಇಲಾಖೆಯಿಂದ ಬಂದಿಲ್ಲ. ವಿಶ್ವವಿದ್ಯಾಲಯದ ಶಿಕ್ಷಕರ ಸಂಘದಿಂದಲೇ ನಮಗೆ ಈ ರೀತಿಯ ಮನವಿಗಳಉ ಬಂದಿದ್ದವು. ವಿಶ್ವವಿದ್ಯಾಲಯ ಆಯೋಗದ ಮಾರ್ಗದರ್ಶನದಂತೆ ನಿವೃತ್ತಿ ವಯಸ್ಸನ್ನು 65ಕ್ಕೆ ಏರಿಕೆ ಮಾಡುವಂತೆ ಆಗ್ರಹಿಸಿದ್ದರು. ಈಗಾಗಲೇ ಹಲವು ರಾಜ್ಯಗಳು ಆಯೋಗ ಮಾರ್ಗದರ್ಶನಗಳಂತೆ ನಡೆಯುತ್ತಿದೆ. ಆರ್ಥಿಕ ಇಲಾಖೆಯ ಒಪ್ಪಿಗೆಯಿಲ್ಲದೆಯೇ ನಾವು ಅಂತಹ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ. ಆರ್ಥಿಕ ಹೊರೆಯನ್ನು ಪರಿಗಣನೆಗೆ ತೆಗೆದುಕೊಂಡು ವಿಶ್ವವಿದ್ಯಾಲಯಗಳ ಬಳಿ ವರದಿಯನ್ನು ಕೇಳಿದ್ದೇವೆಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com