ಕೆ. ರತ್ನಪ್ರಭಾ
ರಾಜ್ಯ
ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಸೇವಾವಧಿ 3 ತಿಂಗಳು ವಿಸ್ತರಣೆ
: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಸೇವಾವಧಿಯನ್ನು ಮೂರು ತಿಂಗಳ ಕಾಲ ಅಂದರೆ ಜೂನ್ 30 2018ರ ವರೆಗೆ ವಿಸ್ತರಣೆ ಮಾಡಲಾಗಿದೆ. ...
ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಸೇವಾವಧಿಯನ್ನು ಮೂರು ತಿಂಗಳ ಕಾಲ ಅಂದರೆ ಜೂನ್ 30 2018ರ ವರೆಗೆ ವಿಸ್ತರಣೆ ಮಾಡಲಾಗಿದೆ.
1981ರ ತಂಡದ ಐಎಎಸ್ ಅಧಿಕಾರಿಯಾದ ರತ್ನಪ್ರಭಾ ಅವರು ಈ ತಿಂಗಳ 31 ರಂದು ಶನಿವಾರ ನಿವೃತ್ತಿಯಾಗಬೇಕಿತ್ತು. ಸೇವಾವಧಿಯನ್ನು ಮುಂದಿನ ಮೂರು ತಿಂಗಳು ವಿಸ್ತರಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರು ಕಳೆದ ಫೆಬ್ರವರಿ 20 ರಂದು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿದ್ದರು
ಈ ಶಿಫಾರಸಿಗೆ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಅನುಮೋದನೆ ನೀಡಿ ಗುರುವಾರ ರಾಜ್ಯದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಮಾಹಿತಿ ರವಾನಿಸಿದೆ.
ಏಪ್ರಿಲ್ 1 ರಿಂದ ಜೂನ್ 30 ರವರೆಗೆ ರತ್ನಪ್ರಭಾ ಸೇವಾವಧಿ ವಿಸ್ತರಣೆ ಮಾಡಲಾಗಿದ್ದು, ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿ ಬದಲಾವಣೆ ಮಾಡಲು ಬಯಸದ ರಾಜ್ಯ ಸರ್ಕಾರ ಸೇವಾವಧಿ ವಿಸ್ತರಣೆ ಮಾಡಲು ನಿರ್ಧರಿಸಿ ಕೇಂದ್ರಕ್ಕೆ ಶಿಫಾರಸು ಮಾಡಿತ್ತು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ