ಮೂಲಗಳ ಪ್ರಕಾರ ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ಅವರ ಕಚೇರಿಯಲ್ಲಿ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದರು. ಎಷ್ಟೇ ಪ್ರಯತ್ನಿಸಿದರೂ ಕಚೇರಿ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಸಚಿವರ ಕಚೇರಿ ವಶಕ್ಕೆ ಪಡೆಯುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶಿಸಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಮೂವರು ಸಿಬ್ಬಂದಿ ಕೆಲಸ ಮಾಡುತ್ತಿದ್ದರು, ಕೆಲಸದ ವೇಳೆ ಮುಂಬಾಗಿಲಿಗೆ ಬೀಗ ಹಾಕಲಾಗಿತ್ತು, ಸ್ಥಳಕ್ಕೆ ಬಂದ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಬರಿಗೈಲಿ ವಾಪಸ್ಸಾಗಿದ್ದರು, ಒಳಗಿರುವ ಸಿಬ್ಬಂದಿ ಪೇಪರ್ ಕಟಿಂಗ್ ಮಾಡುತ್ತಿದ್ದರು ಎಂದು ಕೆಲವರು ಆರೋಪಿಸಿದ್ದರು.