ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದವರಿಗೆ ನಿಸ್ವಾರ್ಥ ಫೌಂಡೇಶನ್ ನಿಂದ ವಿದ್ಯಾರ್ಥಿವೇತನ: ನಿಬಂಧನೆಗಳು ಅನ್ವಯ

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಆರ್ಥಿಕ ನೆರವು ಅಗತ್ಯವಿರುವ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ನಿಸ್ವಾರ್ಥ ಫೌಂಡೇಶನ್ ಅರ್ಜಿಗಳಿಗೆ ಅಹ್ವಾನ
ನಿಸ್ವಾರ್ಥ ಫೌಂಡೇಷನ್
ನಿಸ್ವಾರ್ಥ ಫೌಂಡೇಷನ್
ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಆರ್ಥಿಕ ನೆರವು ಅಗತ್ಯವಿರುವ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ನಿಸ್ವಾರ್ಥ ಫೌಂಡೇಶನ್ ಅರ್ಜಿಗಳಿಗೆ ಅಹ್ವಾನ ನೀಡಿದೆ. 
ವಿದ್ಯಾರ್ಥಿ ವೇತನ ಪಡೆಯಲು ಕೆಲವು ನಿಬಂಧನೆಗಳಿದ್ದು, ವಿದ್ಯಾರ್ಥಿ ವೇತನ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕ  ಪಡೆದಿರಬೇಕು ಹಾಗೂ ವಿದ್ಯಾರ್ಥಿಗಳು ಸರ್ಕಾರಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿರಬೇಕು. ಈ ಅರ್ಹತೆಗಳಿರುವ ವಿದ್ಯಾರ್ಥಿಗಳು www.nisvartha.org  ವೆಬ್ ಸೈಟ್ ಮೂಲಕ ತಮ್ಮ ವಿವರಗಳ ಸಹಿತ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಅರ್ಜಿಗಳನ್ನು ಸೂಕ್ತವಾಗಿ ಪರಿಶೀಲಿಸಿ ಸಂಸ್ಥೆಯವರು ವಿದ್ಯಾರ್ಥಿಗಳನ್ನು ಸಂಪರ್ಕಿಸುತ್ತಾರೆ. 
ಆರ್ಥಿಕ ನೆರವು ಅಗತ್ಯವಿರುವ ಅರ್ಹ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಸಹಕಾರಿಯಾಗುವ ನಿಟ್ಟಿನಲ್ಲಿ ನಿಸ್ವಾರ್ಥ ಫೌಂಡೇಶನ್ 2009 ರಿಂದ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com