ಬೆಂಗಳೂರು: ಸಿನಿಮೀಯ ರೀತಿ ಕಾರ್ಯಾಚರಣೆ, ಕಾರಿನಲ್ಲಿ ಸಾಗಿಸುತ್ತಿದ್ದ 85 ಲಕ್ಷ ಹಣ ವಶ

ಸಿನಿಮಾ ಮಾದರಿಯಲ್ಲಿ ಕಾರನ್ನು ಚೇಸ್ ಮಾಡಿದ ಚುನಾವಣಾಧಿಕಾರಿಗಳು ಹಾಗೂ ತೆರಿಗೆ ಇಲಾಖಾ ಅಧಿಕಾರಿಗಳು ಕಾರಿನಲ್ಲಿದ್ದ 85 ಲಕ್ಷ ಹಣ ವಶಕ್ಕೆ ಪಡೆದುಕೊಂಡ ಘಟನೆ ನೆಲಮಂಗಲದ ಬಳಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಬೆಂಗಳೂರು: ಸಿನಿಮಾ ಮಾದರಿಯಲ್ಲಿ ಕಾರನ್ನು ಚೇಸ್ ಮಾಡಿದ ಚುನಾವಣಾಧಿಕಾರಿಗಳು ಹಾಗೂ ತೆರಿಗೆ ಇಲಾಖಾ ಅಧಿಕಾರಿಗಳು ಕಾರಿನಲ್ಲಿದ್ದ 85 ಲಕ್ಷ ಹಣ ವಶಕ್ಕೆ ಪಡೆದುಕೊಂಡ ಘಟನೆ ನೆಲಮಂಗಲದ ಬಳಿ ನಡೆದಿದೆ.
ಸೋಮವಾರ ಬೆಳಿಗ್ಗೆ  ನೆಲಮಂಗಲದ ಜಾಸ್‍ಟೋಲ್ ಸಮೀಪದ ಚುನಾವಣಾ ಚೆಕ್‍ಪೊೀಸ್ಟ್ ಬಳಿ ಕಾರಿನಲ್ಲಿ ಹಣ ಸಾಗಿಸುತ್ತಿದ್ದಾಗ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಣ ಯಾರಿಗೆ ಸೇರಿದ್ದೆನ್ನುವ ಸಂಬಂಧ ತನಿಖೆ ನಡೆಯುತ್ತಿದೆ.
ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಮಹೀಂದ್ರ ಕಾರಿನಲ್ಲಿ 85 ಲಕ್ಷ ರೂ. ಸಾಗಣೆ ಮಾಡಲಾಗುತ್ತಿದೆ ಎನ್ನುವ ನಿಖರ ಮಾಹಿತಿ ಪಡೆದ ಅಧಿಕಾರಿಗಳು ಕಾರನ್ನು ಚೇಸ್ ಮಾಡುತ್ತಾರೆ ಹಾಗೆ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರನ್ನು ಅಡ್ಡಗಟ್ಟಿ ಹಣವನ್ನು ವಶಕ್ಕೆ ಪಡೆಯುತ್ತಾರೆ. 
ಐಟಿ ಅಧಿಕಾರಿಗಳು ನೀಡಿದ ಮಾಹಿತಿ ಮೇರೆಗೆ ನಾವು ನೆಲಮಂಗಲದ ಬಳಿ ಕಾರನ್ನು ಅಡ್ಡಗಟ್ಟಿ ಪರಿಶೀಲಿಸಿದೆವು ಆಗ ಆರಿನ ಸೀಟಿನಡಿ ಹುದುಗಿಸಿಡಲಾಗಿದ್ದ 85 ಲಕ್ಷ ಹಣ ಪತ್ತೆಯಾಗಿದೆ. ಕಾರಿನಲ್ಲಿದ್ದ ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com