ರಾಜ್ಯ

ನಿಂತಿದ್ದ ಲಾರಿಗೆ ಕಾರು ಢಿಕ್ಕಿ, ಬಂಗಾರಪೇಟೆ ತಹಶೀಲ್ದಾರ್ ಸಾವು!

ನಿಂತಿದ್ದ ಲಾರಿಗೆ ಕಾರು ಢಿಕ್ಕಿ, ಬಂಗಾರಪೇಟೆ ತಹಶೀಲ್ದಾರ್ ಸಾವು!
ಸಾಂದರ್ಭಿಕ ಚಿತ್ರ
Published On :

 ಬೆಂಗಳೂರು: ಬೆಂಗಳೂರಿನಲ್ಲಿ ಗುರುವಾರ ನಡೆದ ರಸ್ತೆ ಅಪಘಾತದಲ್ಲಿ ಬಂಗಾರಪೇಟೆ ತಹಶೀಲ್ದಾರ್ ಎಂ.ಎಸ್​. ಸತ್ಯಪ್ರಕಾಶ್ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಗುರುವಾರ ಬೆಳಗ್ಗೆ ಬೆಂಗಳೂರು ಹೊರವಲಯದ ಹೆಬ್ಬಾಳದ ಭದ್ರಪ್ಪ ಲೇಔಟ್​ನಲ್ಲಿ ಈ ದುರ್ಘಟನೆ ನಡೆದಿದ್ದು, ವೇಗವಾಗಿ ಬಂದ ತಹಶೀಲ್ದಾರ್ ಎಂ ಎಸ್ ಸತ್ಯ ಪ್ರಕಾಶ್ ಅವರ ಕಾರು ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಸತ್ಯಪ್ರಕಾಶ್ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 
ದುರಂತಕ್ಕೆ ಕಾರಿನ ಅತಿಯಾದ ವೇಗವೇ ಕಾರಣ ಎನ್ನಲಾಗಿದೆ. ಇನ್ನು ಹೆಬ್ಬಾಳ‌ ಟ್ರಾಫಿಕ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗ್ಗೆ ಕೇವಲ ನಾಲ್ಕು ತಿಂಗಳ ಹಿಂದೆ ಮೃತ ತಹಸೀಲ್ದಾರ್​ ಲೋಕಾಯುಕ್ತರ ಬಲೆಗೆ ಬಿದ್ದು ಅಮಾನತುಗೊಂಡಿದ್ದರು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.