ಇನ್ನು ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು, 'ಈಗಾಗಲೇ ಜಲಾಶಯಗಳಲ್ಲಿ ನೀರು ಖಾಲಿಯಾಗಿದೆ. ಬರಗಾಲದಿಂದಾಗಿ ರೈತರು ಬಳಲುತ್ತಿದ್ದಾರೆ. ಇದರಿಂದಾಗಿ ರೈತರ ಆತ್ಮಹತ್ಯೆಗಳಾಗಿವೆ. ಮಾನ್ಯ ನ್ಯಾಯಾಧೀಶರು ಈಗಾಗಲೇ ಹತ್ತು ದಿನಗಳೊಳಗೆ ನೀರು ಬಿಡುವಂತೆ ನೀಡಿರುವ ತೀರ್ಪನ್ನು ಮರುಪರಿಶೀಲಿಸಬೇಕೆಂದು ಒತ್ತಾಯಿಸುತ್ತೇವೆ. ಈ ಕುರಿತು ರಾಜ್ಯದ ಪರ ವಕೀಲರು ಸುಪ್ರೀಂಗೆ ಅರ್ಜಿ ಸಲ್ಲಿಸಬೇಕು ಎಂದು ಅವರು ಆಗ್ರಹಿಸಿದರು.