ಚಾಕುವಿನೊಂದಿಗೆ ಲೋಕಾಯುಕ್ತ ಕಚೇರಿ ಪ್ರವೇಶಿಸಲು ಯತ್ನಿಸಿದ ಮಹಿಳೆ!

ವ್ಯಕ್ತಿಯೊಬ್ಬ ಲೋಕಾಯುಕ್ತ ಕಚೇರಿಗೆ ನುಗ್ಗಿ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್​ ಶೆಟ್ಟಿಯವರ....
ಲೋಕಾಯುಕ್ತ ಕಚೇರಿ
ಲೋಕಾಯುಕ್ತ ಕಚೇರಿ
ಬೆಂಗಳೂರು: ವ್ಯಕ್ತಿಯೊಬ್ಬ ಲೋಕಾಯುಕ್ತ ಕಚೇರಿಗೆ ನುಗ್ಗಿ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್​ ಶೆಟ್ಟಿಯವರ ಮೇಲೆ ಚಾಕುವಿನಿಂದ ಗಂಭೀರ ಹಲ್ಲೆ ಮಾಡಿದ್ದ ಘಟನೆ ಮಾಸುವ ಮುನ್ನವೇ ಮತ್ತೊಂದು ಆಘಾತಕಾರಿ ಘಟನೆ ಗುರುವಾರ ನಡೆದಿದೆ.
ಇಂದು ಚಾಕುವಿನೊಂದಿಗೆ ಲೋಕಾಯುಕ್ತ ಕಚೇರಿ ಪ್ರವೇಶಿಸಲು ಯತ್ನಿಸಿದ 35 ವರ್ಷದ ಮಹಿಳೆಯೊಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಾರಣಾಂತಿಕ ಹಲ್ಲೆಯಿಂದ ಚೇತರಿಸಿಕೊಂಡಿದ್ದ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರು ಒಂದು ವಾರಗಳ ಹಿಂದಷ್ಟೇ ಕರ್ತವ್ಯಕ್ಕೆ ಹಾಜರಾಗಿದ್ದರು. 
ಬಂಧಿತ ಮಹಿಳೆಯನ್ನು ಸೋನಿಯಾ ರಾಣಿ ಅಲಿಯಾಸ್ ಸೋನು ಎಂದು ಗುರುತಿಸಲಾಗಿದ್ದು, ಮಧ್ಯಾಹ್ನ 12.15ರ ಲೋಕಾಯುಕ್ತ ಕಚೇರಿಗೆ ಆಗಮಿಸಿದ್ದಾರೆ.
ಲೋಕಾಯುಕ್ತ ಕಚೇರಿಯ ರಿಜಿಸ್ಟರ್​ ಪುಸ್ತಕದಲ್ಲಿ ಸೋನಿಯಾ ರಾಣಿ, ರಾಜಾಜಿನಗರ ನಿವಾಸಿ ಎಂಬುದಾಗಿ ಬರೆದಿದ್ದಾರೆ. 
ಮೆಟಲ್​ ಡಿಟೆಕ್ಟರ್ ​ನಲ್ಲಿ ಮಹಿಳೆಯ ಬಳಿ ಇದ್ದ ಚಾಕು ಪತ್ತೆಯಾಗಿಲ್ಲ. ನಂತರ ತಪಾಸಣೆ ನಡೆಸುತ್ತಿದ್ದ ಮಹಿಳಾ ಪೊಲೀಸ್​ ಸಿಬ್ಬಂದಿಗೆ ಆಕೆಯ ಬಳಿ ಇದ್ದ ಫೈಲ್ ನಲ್ಲಿ ಚಾಕು ಇರುವುದು ಪತ್ತೆಯಾಗಿದೆ. ಕೂಡಲೇ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
ವಿಚಾರಣೆ ವೇಳೆ ಮಹಿಳೆ ತಾನು ದಿವಂಗತ ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಪತ್ನಿ ಎಂಬುದಾಗಿ ಹೇಳಿಕೆ ನೀಡಿದ್ದಾರೆ. ಜತೆಗೆ ತಾನು ಇಟಲಿ ಪ್ರಜೆ ಎಂಬುದಾಗಿಯೂ ಹೇಳಿಕೆ ನೀಡಿದ್ದಾಳೆ ಎನ್ನಲಾಗಿದೆ. ಸದ್ಯ ವಿಧಾನಸೌಧ ಪೊಲೀಸರು ಮಹಿಳೆಯ ವಿಚಾರಣೆ ನಡೆಸುತ್ತಿದ್ದು ಘಟನೆಯ ಅಧಿಕೃತ ಮಾಹಿತಿ ನಂತರ ಹೊರಬೀಳಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com