ಚಿಕ್ಕಮಗಳೂರು: ಅನುಮತಿ ಪಡೆಯದೆ ಕಾರ್ಯಕ್ರಮ ನಡೆಸಿದ ಆರೋಪದ ಮೇಲೆ ನಟ ಪ್ರಕಾಶ್ ರೈ ಹಾಗೂ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಸಂವಿಧಾನದ ಉಳಿವಿದಾಗಿ ಕರ್ನಾಟಕ ಹಾಗೂ ಹೋರಾಟ ಗೀತೆ ಎಂಬ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರ ವಿರುದ್ಧ ಎಫ್ಐಆರ್ ದಾಖಲಿಸಿದೆ.
ಚಿಕ್ಕಮಗಳೂರು ನಗರದ ಕುವೆಂಪು ಕಲಾಮಂದಿರದಲ್ಲಿ ನಡೆಯಬೇಕಿದ್ದ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಅನುಮತಿ ನಿರಾಕರಿಸಿತ್ತು. ಇದರಿಂದಾಗಿ ನಗರದ ಅಂಡೇ ಛತ್ರದ ಬಳಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ 15ಕ್ಕೂ ಅಧಿಕ ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.