ಅವಿವಾಹಿತರಾಗಿದ್ದ ಸಿದ್ದಪ್ಪ ಸಾರಕ್ಕಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಗುರುವಾರ ರಾತ್ರಿ 11.45ರ ಸುಮಾರಿಗೆ ಕೆಲಸ ಮುಗಿಸಿಕೊಂಡು ಜಯನಗರ ಠಾಣೆಯಿಂದ ಸಾರಕ್ಕಿಯಲ್ಲಿರುವ ತಮ್ಮ ಮನೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಜಯನಗರ 7ನೇ ಬ್ಲಾಕ್ ಕಡೆಯಿಂದ ಬನಶಂಕರಿ ಕಡೆಗೆ ವೇಗವಾಗಿ ಹೋಗುತ್ತಿದ್ದ ಬಸ್ ಬೈಕ್'ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕೆಳಗೆ ಬಿದ್ದ ಪೇದೆ ಮೇಲೆ ಬಸ್ ಹರಿದಿದೆ. ಈ ವೇಳೆ ಪೇದೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆಂದು ಪೊಲೀಸರು ಹೇಳಿದ್ದಾರೆ.