ಪ್ರಧಾನಿ ಮೋದಿ ಹೊರಡೋ ವೇಳೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಗುಂಡುಗಳು ಪತ್ತೆ, ಆತಂಕ ಸೃಷ್ಟಿ!

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಚುನಾವಣಾ ಸಭೆಯಲ್ಲಿ ಭಾಗವಹಿಸಿ ಪ್ರಧಾನಿ ನರೇಂದ್ರ ಮೋದಿ ವಾಪಸು ತೆರಳುತ್ತಿದ್ದ ವೇಳೆ ಮಂಗಳೂರು ವಿಮಾನ ನಿಲ್ದಾಣದಲ್ಲಿ...
Updated on: 
ಮಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಚುನಾವಣಾ ಸಭೆಯಲ್ಲಿ ಭಾಗವಹಿಸಿ ಪ್ರಧಾನಿ ನರೇಂದ್ರ ಮೋದಿ ವಾಪಸು ತೆರಳುತ್ತಿದ್ದ ವೇಳೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಗುಂಡುಗಳು ಪತ್ತೆಯಾದ ಘಟನೆ ನಡೆದಿದೆ. 
ಮಂಗಳೂರು ವಿಮಾನ ನಿಲ್ದಾಣದಲ್ಲಿ ಭದ್ರತಾ ಸಿಬ್ಬಂದಿಗಳು ತೀವ್ರ ತಪಾಸಣೆ ನಡೆಸುವ ವೇಳೆ ದಕ್ಷಿಣ ಕನ್ನಡದ ಬೆಳ್ತಂಗಡಿ ಮೂಲದ 65 ವರ್ಷದ ಇಸ್ಮಾಯಿಲ್ ಎಂಬಾತನ ಬ್ಯಾಗ್ ನಲ್ಲಿ ಈ ಬುಲೆಟ್ ಗಳು ಪತ್ತೆಯಾಗಿವೆ. 
ಪ್ರಧಾನಿ ನರೇಂದ್ರ ಮೋದಿ ಅವರು ಹೊರಡುವ ವೇಳೆ ಈ ಬುಲೆಟ್ ಗಳು ಪತ್ತೆಯಾಗಿದ್ದರಿಂದ ವಿಮಾನ ನಿಲ್ದಾಣದಲ್ಲಿ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. 
ವಿಚಾರಣೆ ವೇಳೆ ಇಸ್ಮಾಯಿಲ್ ಪರವಾನಿಗೆ ಹೊಂದಿದ್ದ ಶಸ್ತ್ರ ಹೊಂದಿರುವ ವಿಚಾರ ಬಯಲಾಗಿದೆ. ಅದನ್ನು ಪೊಲೀಸ್ ಠಾಣೆಯಲ್ಲಿ ಸರಂಡರ್ ಮಾಡಿದ್ದಾಗಿ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com