ದ್ವಿತೀಯ ಪಿಯು ವಿದ್ಯಾರ್ಥಿಗಳ ಬಸ್ ಪಾಸ್ ಅವಧಿ ವಿಸ್ತರಣೆ

ಪ್ರಸಕ್ತ ಸಾಲಿನ ಒಂದು ತಿಂಗಳು ಮುಂಚಿತವಾಗಿಯೇ ಅಂದರೆ ಮೇ 2ರಿಂದ ದ್ವಿತೀಯ ಪಿಯು ಆರಂಭವಾಗಿರುವ ಹಿನ್ನಲೆಯಲ್ಲಿ ಹಾಲಿ ಇರುವ ಹಳೆಯ ಬಸ್ ಪಾಸ್ ಗಳ ಅವಧಿ ವಿಸ್ತರಣೆ ಮಾಡಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಪ್ರಸಕ್ತ ಸಾಲಿನ ಒಂದು ತಿಂಗಳು ಮುಂಚಿತವಾಗಿಯೇ ಅಂದರೆ ಮೇ 2ರಿಂದ ದ್ವಿತೀಯ ಪಿಯು ಆರಂಭವಾಗಿರುವ ಹಿನ್ನಲೆಯಲ್ಲಿ ಹಾಲಿ ಇರುವ ಹಳೆಯ ಬಸ್ ಪಾಸ್ ಗಳ ಅವಧಿ ವಿಸ್ತರಣೆ ಮಾಡಲಾಗಿದೆ.
ಪ್ರಸಕ್ತ ಸಾಲಿವ ಪಾಸು ವಿತರಣೆಯಾಗುವವರೆಗೂ ದ್ವಿತೀಯ ಪಿಯು ವಿದ್ಯಾರ್ಥಿಗಳು ಈಗಿರುವ ಬಸ್ ಪಾಸ್ ಗಳ ಮೂಲಕವೇ ಉಚಿತವಾಗಿ ಪ್ರಯಾಣಿಸಲು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೆಎಸ್ ಆರ್ ಟಿಸಿ ಅವಕಾಶ ಕಲ್ಪಿಸಿದೆ. ಒಂದು ತಿಂಗಳ ಮುಂಚಿತವಾಗಿ ಅಂದರೆ ಮೇ 2 ರಿಂದಲೇ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯು ತರಗತಿಗಳನ್ನು ಪ್ರಾರಂಭಿಸಿದ್ದು, ಇದರಿಂದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಲಿದೆ.
ಕೆಎಸ್ ಆರ್ ಟಿಸಿ ಪ್ರತೀ ವರ್ಷದಂತೆ ಜೂನ್ ತಿಂಗಳಿನಿಂದ ನೂತನ ಶೈಕ್ಷಣಿಕ ವರ್ಷದ ಬಸ್ ಪಾಸ್ ವಿತರಿಸಲಿದೆ. ಇದೇ ಕಾರಣಕ್ಕೆ ಕೆಎಸ್ ಆರ್ ಟಿಸಿ ನೂತನ ಬಸ್ ಪಾಸ್ ಗಳು ವಿತರಣೆಯಾಗುವವರೆಗೂ ಹಳೆಯ ಪಾಸ್ ಗಳನ್ನೇ ಬಳಕೆ ಮಾಡಲು ವಿದ್ಯಾರ್ಥಿಗಳಿಗೆ ಸೂಚನೆ ನೀಡಿದೆ. ಅದರಂತೆ ಹಳೆಯ ಬಸ್ ಪಾಸ್ ಗಳ ಅವಧಿಯನ್ನು ಇನ್ನೂ ಒಂದು ತಿಂಗಳ ಕಾಲ ವಿಸ್ತರಣೆ ಮಾಡಿದೆ.
ಈ ಬಗ್ಗೆ ಬಿಎಂಟಿಸಿ, ವಾಯುವ್ಯ ಮತ್ತು ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಗಳು ಮಾಹಿತಿ ನೀಡಿದ್ದು, ಈ ಸಂಸ್ಥೆಗಳ ವ್ಯಾಪ್ತಿಯ ವಿದ್ಯಾರ್ಥಿಗಳಿಗೂ ಇದು ಅನ್ವಯವಾಗಲಿದೆ ಎಂದು ಕೆಎಸ್ ಆರ್ ಟಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com