ಬೆಂಗಳೂರು: ರಾಷ್ಟ್ರೀಯ ಅರ್ಹತೆ ಕಮ್ ಪ್ರವೇಶ ಪರೀಕ್ಷೆ (ನೀಟ್) ಪರೀಕ್ಷೆಯು ಇಂದು ದೇಶಾದ್ಯಂತ ನಡೆಯಲಿದೆ. ಒಟ್ಟು 13,26,725 ಅಭ್ಯರ್ಥಿಗಳು ವೈದ್ಯಕೀಯ, ದಂತ ಮತ್ತು ಆಯುಶ್ ಕೋರ್ಸುಗಳಿಗೆ ಪ್ರವೇಶ ಪರೀಕ್ಷೆಗೆ ಹಾಜರಾಗಲಿದ್ದಾರೆ.
ರಾಜ್ಯದ 96,377 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬೆಂಗಳೂರು, ಬೆಳಗಾವಿ, ಕಲಬುರ್ಗಿ, ಹುಬ್ಬಳ್ಳಿ, ದಾವಣಗೆರೆ, ಮಂಗಳೂರು, ಉಡುಪಿ, ಮೈಸೂರು, ಧಾರವಾಡ ಸೇರಿ ಪ್ರಮುಖ ನಗರಗಳಲ್ಲಿ ಪರೀಕ್ಷೆಗಳು ನಡೆಯಲಿದೆ.
ಈ ಬಾರಿ ನೀಟ್ ಪರೀಕ್ಷೆಗಳು 11 ಬಾಷೆಗಳಲ್ಲಿ ಪ್ರಶ್ನೆಪತ್ರಿಕೆಗಳನ್ನು ಹೊಂದಿರಲಿದೆ. ಆದರೆ ಎಲ್ಲಾ ಭಾಷೆಗಳ ಪ್ರಶ್ನೆಪತ್ರಿಕೆಗಳೂ ಏಕ ಪ್ರಕಾರವಾಗಿರುತ್ತದೆ. ಕಳೆದ ಸಾಲಿನ ನೀಟ್ ಪರೀಕ್ಷೆಗಳಲ್ಲಿ ಉಂಟಾದ ಗೊಂದಲಗಳಿಗೆ ಸ್ಪಷ್ಟನೆ ನೀಡಿರುವ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಈ ಬಾರಿ ಎಲ್ಲಾ ಭಾಷಾ ಪ್ರಶ್ನೆಪತ್ರಿಕೆಗಳೂ ಒಂದೇ ರೀತಿಯ ಪ್ರಶ್ನೆಗಳನ್ನು ಹೊಂದಿರಲಿದೆ ಎಂದಿದೆ.