ವಿಧಾನಸಭಾ ಚುನಾವಣೆ; ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಬಿಡುಗಡೆಗೊಳಿಸಿದ್ದ ಪ್ರಣಾಳಿಕೆ ವಿರುದ್ಧ ರಾಷ್ಟ್ರೀಯ ಹಿಂದು ಸೇನಾ ಮುಖಂಡ ಪ್ರಮೋದ್ ಮುತಾಲಿಕ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ವಜಾಗೊಳಿಸಿದೆ...
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
Updated on: 
ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಬಿಡುಗಡೆಗೊಳಿಸಿದ್ದ ಪ್ರಣಾಳಿಕೆ ವಿರುದ್ಧ ರಾಷ್ಟ್ರೀಯ ಹಿಂದು ಸೇನಾ ಮುಖಂಡ ಪ್ರಮೋದ್ ಮುತಾಲಿಕ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ವಜಾಗೊಳಿಸಿದೆ. 
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ. 
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಧರ್ಮದ ಹೆಸರಿನಲ್ಲಿ ಮತಯಾಚನೆ ಮಾಡುತ್ತಿದ್ದು, ಮೇ.12 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಎಲ್ಲರನ್ನೂ ಸ್ಪರ್ಧೆಯಿಂದ ಅನರ್ಹಗೊಳಿಸುವಂತೆ ಮುತಾಲಿಕ್ ಅವರು ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದರು. 
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಬಿಡುಗಡೆ ಮಾಡಿದ್ದ ಪ್ರಣಾಳಇಕೆಯಲ್ಲಿ ಹಲವು ಯೋಜನೆಗಳನ್ನು ಧರ್ಮದ ಆಧಾರದ ಮೇಲೆಯೇ ಹಂಚಿಕೆ ಮಾಡಲಾಗಿದೆ. ಮುಸ್ಲಿಮರು ಮತ್ತು ಅಲ್ಪಸಂಖ್ಯಾತ ಮತಕ್ಕಾಗಿ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ತಾರತಮ್ಯ ಮಾಡಿದೆ. ಇದು ಭಾರತೀಯ ಸಂವಿಧಾನದ ವಿಧಿ 15 ಮತ್ತು 27 ಪ್ರಕಾರ ಅಪರಾಧವಾಗುತ್ತದೆ. ಹೀಗಾಗಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com