ಪೋಷಕರ ಆಯ್ಕೆಯಂತೆ ಮತ ಚಲಾಯಿಸಲಿದ್ದಾರೆ ಯುವ ಮತದಾರರು

ಮೇ.12 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಶೇ.3 ರಷ್ಟು ಯುವ ಮತದಾರರು ಮೊದಲ ಬಾರಿಗೆ ಮತ ಚಲಾಯಿಸುತ್ತಿದ್ದು, ಮತ ಚಲಾವಣೆಗೆ ಸಾಕಷ್ಟು ಉತ್ಸುಕರಾಗಿದ್ದಾರೆ...
ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಮತ ಚಲಾಯಿಸುತ್ತಿರುವ ಯುವ ಮತದಾರರು ಪ್ರತಿಜ್ಞೆ ಮಾಡುತ್ತಿರುವುದು
ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಮತ ಚಲಾಯಿಸುತ್ತಿರುವ ಯುವ ಮತದಾರರು ಪ್ರತಿಜ್ಞೆ ಮಾಡುತ್ತಿರುವುದು
ಬೆಂಗಳೂರು: ಮೇ.12 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಶೇ.3 ರಷ್ಟು ಯುವ ಮತದಾರರು ಮೊದಲ ಬಾರಿಗೆ ಮತ ಚಲಾಯಿಸುತ್ತಿದ್ದು, ಮತ ಚಲಾವಣೆಗೆ ಸಾಕಷ್ಟು ಉತ್ಸುಕರಾಗಿದ್ದಾರೆ. 
ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ಯುವ ಮತದಾರರು ಕೆಲ ಗೊಂದಲಗಳಲ್ಲಿ ಸಿಲುಕಿದ್ದು, ಪೋಷಕರ ಆಯ್ಕೆಯಂತೆ ಮತ ಚಲಾಯಿಸುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 
ರಾಜಕೀಯ ಹಾಗೂ ರಾಜಕೀಯ ಪಕ್ಷಗಳ ಬಗ್ಗೆ ಈ ವರೆಗೂ ತಲೆಕೆಡಿಸಿಕೊಳ್ಳದೇ ಇದ್ದರಿಂದಾಗಿ, ರಾಜಕೀಯ ಬಗ್ಗೆ ಸ್ವಲ್ಪ ಮಟ್ಟಿಗೆ ಜ್ಞಾನವನ್ನು ಹೊಂದಿರುವ ಯುವ ಮತದಾರರು ಪೋಷಕರು ಹೇಳಿದ ಪಕ್ಷಕ್ಕೆ ಮತಹಾಕುವುದಾಗಿ ತಿಳಿಸಿದ್ದಾರೆ. 
ಇದೇ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ದ್ವಿತೀಯ ಸೆಮಿಸ್ಟರ್ ಇಂಜಿನಿಯರಿಂಗ್ ವಿದ್ಯಾರ್ಥಿ ಯಶಸ್ವಿನಿ ನಂದೀಶ್ ಅವರು ಮಾತನಾಡಿ, ರಾಜಕೀಯದಲ್ಲಿ ನನಗೆ ಆಸಕ್ತಿಯಿಲ್ಲ. ಇದೇ ಮೊದಲ ಬಾರಿಗೆ ನಾನು ಮತ ಚಲಾಯಿಸುತ್ತಿದ್ದೇನೆ. ನನ್ನ ಪೋಷಕರು ಹೇಳಿದ ಪಕ್ಷ ಹಾಗೂ ಅಭ್ಯರ್ಥಿಗೆ ಮತ ಹಾಕುತ್ತೇನೆಂದು ಹೇಳಿದ್ದಾರೆ. 
ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ಯುವ ಮತದಾರರ ಪ್ರತಿಕ್ರಿಯೆಗಳನ್ನು ಪಡೆಯಲು ಕೆಲ ಕಾಲೇಜುಗಳಿಗೆ ಭೇಟಿ ನೀಡಲಾಗಿತ್ತು. ಈ ವೇಳೆ ಹಲವು ವಿದ್ಯಾರ್ಥಿಗಳು ಪೋಷಕರ ಆಯ್ಕೆಯಂತೆಯೇ ಮತ ಚಲಾಯಿಸುವುದಾಗಿ ತಿಳಿಸಿದರು. 
ನಾವು ಮತ ಹಾಕುವುದರಿಂದ, ಹಾಕದೇ ಇರುವುದರಿಂದ ಯಾವುದೇ ವ್ಯತ್ಯಾಸಗಳಾಗುವುದಿಲ್ಲ. ನಾನು ನನ್ನ ವಿದ್ಯಾಭ್ಯಾಸದತ್ತ ಗಮನ ಹರಿಸುತ್ತಿದ್ದೇನೆ. ಪ್ರಸ್ತುತ ಕಾಲೇಜಿನಲ್ಲಿ ಪರೀಕ್ಷೆಗಳು ನಡೆಯುತ್ತಿವೆ. ರಾಜಕೀಯ ಹಾಗೂ ಚುನಾವಣೆ ಬಗ್ಗೆ ತಿಳಿದುಕೊಳ್ಳಲು ನನಗೆ ಸಮಯಾವಾದರೂ ಎಲ್ಲಿದೆ? ಆದರೂ, ನಾನು ಇದೇ ಮೊದಲ ಬಾರಿಗೆ ಮತ ಚಲಾಯಿಸುತ್ತಿದ್ದೇನೆ. ಮೊದಲ ಬಾರಿಗೆ ಮತ ಚಲಾಯಿಸಲು ಬಹಳ ಉತ್ಸುಕನಾಗಿದ್ದೇನೆ. ಮತ ಚಲಾಯಿಸಲು ಪೋಷಕರ ಸಲಹೆಗಳನ್ನು ಪಡೆದುಕೊಳ್ಳುತ್ತೇನೆಂದು ಬೆಂಗಳೂರಿನ ಗ್ಲೋಬರ್ ಕಾಲೇಜ್ ಆಫ್ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ. 
ಇನ್ನು ಕೆಲ ಯುವ ಮತದಾರರಿಗೆ ತಮ್ಮ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿನಿಂತಿದ್ದಾರೆಂಬುದರ ಮಾಹಿತಿಯೇ ತಿಳಿದಿಲ್ಲ. ರಾಜ್ಯದ ಮುಖ್ಯಮಂತ್ರಿ ಹಾಗೂ ದೇಶದ ಪ್ರಧಾನಮಂತ್ರಿಯಷ್ಟೇ ನನಗೆ ಗೊತ್ತು ಎಂದು ದ್ವಿತೀಯ ಪಿಯುಸಿ ಪರೀಕ್ಷೆ ಪೂರ್ಣಗೊಳಿಸಿ ಪದವಿಗೆ ಕಾಲಿಡುತ್ತಿರುವ ಮತ್ತೊಬ್ಬ ವಿದ್ಯಾರ್ಥಿ ಹೇಳಿದ್ದಾರೆ. 
ಬೆಂಗಳೂರು ಕೇಂದ್ರೀಯ ವಿಶ್ವವಿದ್ಯಾಲಯ ಉಪ ಕುಲಪತಿ ಪ್ರೊ.ಎಸ್.ಜಾಫೆಟ್ ಅವರು ಮಾತನಾಡಿ, ವಿದ್ಯಾರ್ಥಿಗಳ ಚುನಾವಣೆಗಳಿದ್ದಾಗ, ಯುವಕರಿಗೆ ರಾಜಕೀಯ ಬೆಳವಣಿಗೆಗಳ ಬಗ್ಗೆ ಅರಿವಿರುತ್ತದೆ. ಇಂದಿನ ಯುವಕರು ವಾಸ್ತವ ಜಗತ್ತಿನಲ್ಲಿ ಕಾರ್ಯನಿರತರಾಗಿದ್ದಾರೆಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com