

ಬೆಂಗಳೂರು : ಕಳೆದ ಬಾರಿಯ ಚುನಾವಣೆಗೆ ಹೋಲಿಸಿದ್ದರೆ ಈ ಬಾರಿ ಆರು ಪಟ್ಟು ಹೆಚ್ಚು ನಗದು, ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಒಟ್ಟಾರೆ, ಮೊತ್ತ 37.33 ಕೋಟಿ ರೂ ಆಗಿದೆ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ.
ಮನೆ ಮನೆ ಮತಯಾಚನೆ ಇಂದು ಅಂತ್ಯಗೊಳ್ಳಲಿದ್ದು, 224 ವಿಧಾನಸಭಾ ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯಲಿದೆ.
ಚುನಾವಣೆ ನೀತಿ ಸಂಹಿತೆ ಜಾರಿಯಾದ ದಿನದಿಂದ ಈವರೆಗೂ 31 ಕೋಟಿ 50 ಲಕ್ಷ ರೂ ನಗದು ಹಾಗೂ 5. ಕೋಟಿ 83 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿರುವುದಾಗಿ ಆದಾಯ ತೆರಿಗೆ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.
ಕಳೆದ ಬಾರಿಯ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ 4 ಕೋಟಿ 97 ಲಕ್ಷ ನಗದು ಹಾಗೂ 3. ಕೋಟಿ 41 ಲಕ್ಷ ಚಿನ್ನಾಭರಣವನ್ನು ವಶಕೊಡಿಸಿಕೊಳ್ಳಲಾಗಿತ್ತು.
ಈ ಬಾರಿಯ ಚುನಾವಣೆಯಲ್ಲಿ ಅಭ್ಯರ್ಥಿಗಳು ವೆಚ್ಚ ಮಾಡುವ ಹಣದ ಬಗ್ಗೆ ಸಂಪೂರ್ಣ ನಿಗಾ ವಹಿಸಲಾಗಿತ್ತು, ಜನಪ್ರತಿನಿಧಿ ಕಾಯ್ದೆ ಪ್ರಕಾರ ಚುನಾವಣಾ ಆಯೋಗ, ಜಿಲ್ಲಾ ಚುನಾವಣಾಧಿಕಾರಿ ಮತ್ತು ಮುಖ್ಯ ಚುನಾವಣಾಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿರುವುದಾಗಿ ಹೇಳಲಾಗಿದೆ.
ಅಭ್ಯರ್ಥಿಗಳು ಹಾಗೂ ಅವರ ಕುಟುಂಬ ಸದಸ್ಯರು ಸಲ್ಲಿಸಿರುವ ಆದಾಯ ತೆರಿಗೆಯೊಂದಿಗೆ ಅವರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಅಫಿಡವಿಟ್ ಕೂಡಾ ಪರಾಮರ್ಶೆ ನೆಡೆಸಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಹೇಳಿಕೆಯಲ್ಲಿ ತಿಳಿಸಲಾಗಿದೆ.