ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಣದಲ್ಲಿದೆ: ಡಿಜಿ-ಐಜಿಪಿ ನೀಲಮಣಿ

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಣದಲ್ಲಿದ್ದು, ಈ ಬಗ್ಗೆ ಚುನಾವಣಾ ಆಯೋಗಕ್ಕೆ ತೃಪ್ತಿಯಿದೆ ಎಂದು ಪೊಲೀಸ್ ಮಹಾ ನಿರ್ದೇಶಕ ಮತ್ತು ಮಹಾ ನಿರೀಕ್ಷಕ ಮಹಿಳಾಧಿಕಾರಿ ನೀಲಮಣಿ ಎನ್ ರಾಜು ಅವರು ಶುಕ್ರವಾರ ಹೇಳಿದ್ದಾರೆ...
ಡಿಜಿ-ಐಜಿಪಿ ನೀಲಮಣಿ
ಡಿಜಿ-ಐಜಿಪಿ ನೀಲಮಣಿ
Updated on: 
ಬೆಂಗಳೂರು; ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಣದಲ್ಲಿದ್ದು, ಈ ಬಗ್ಗೆ ಚುನಾವಣಾ ಆಯೋಗಕ್ಕೆ ತೃಪ್ತಿಯಿದೆ ಎಂದು ಪೊಲೀಸ್ ಮಹಾ ನಿರ್ದೇಶಕ ಮತ್ತು ಮಹಾ ನಿರೀಕ್ಷಕ ಮಹಿಳಾಧಿಕಾರಿ ನೀಲಮಣಿ ಎನ್ ರಾಜು ಅವರು ಶುಕ್ರವಾರ ಹೇಳಿದ್ದಾರೆ.
ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಭದ್ರತೆ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಈ ಬಗ್ಗೆ ಚುನಾವಣಾ ಆಯೋಗ ತೃಪ್ತಿ ವ್ಯಕ್ತಪಡಿಸಿದೆ. ಶೇ.20ರಷ್ಟು ಬೂತ್ ಗಳನ್ನು ಅತೀ ಸೂಕ್ಷ್ಮವೆಂದು ಪರಿಗಣಿಸಲಾಗಿದ್ದು, ರಾಜ್ಯದಲ್ಲಿ ಈಗಾಗಲೇ 82,157 ಪೊಲೀಸು ಮತ್ತು ಗೃಹ ರಕ್ಷಕ ದಳವನ್ನು ನಿಯೋಜಿಸಲಾಗಿದೆ. 585 ಕೇಂದ್ರೀಯ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ. 
ಈ ವರೆಗೂ ಯಾವುದೇ ರೀತಿಯ ಕೋಮು ಗಲಭೆಗಳು ವರದಿಯಾಗಿಲ್ಲ. ರೂ.166 ಕೋಟಿಯಷ್ಟು ಹಣವನ್ನು ಹಾಗೂ ಚುನಾವಣೆಗೆ ಸಂಬಂಧಿಸಿದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. 
ವಿಧಾನಸಭಾ ಚುನಾವಣೆಗೆ ಜನವರಿ ತಿಂಗಳಿನಿಂದಲೇ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿತ್ತು. ಹಲವು ಬಾರಿ ಸಭೆಗಳನ್ನು ನಡೆಸಲಾಗಿತ್ತು. ಅಧಿಸೂಚನೆಗೂ ಮುನ್ನವೇ ಸಭೆಗಳನ್ನು ನಡೆಸಿದ್ದೇವೆಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com