ಬೆಂಗಳೂರು; ಹಂಪಿ ನಗರದಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ರಾಜ್ಯ ವಿಧಾನಸಭಾ ಚುನಾವಣೆ ಮತದಾನ ಬಿರುಸಿನಿಂದ ಮುಂದುವರೆದಿದ್ದು, ಈ ನಡುವಲ್ಲೇ ಹಂಪಿ ನಗರದಲ್ರಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತ ನಡುವೆ ಮಾರಾಮಾರಿ ನಡೆದಿರುವುದಾಗಿ ಶನಿವಾರ ವರದಿಗಳು ತಿಳಿಸಿವೆ...
ಬೆಂಗಳೂರು; ಹಂಪಿ ನಗರದಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಬೆಂಗಳೂರು; ಹಂಪಿ ನಗರದಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
Updated on: 
ಬೆಂಗಳೂರು; ರಾಜ್ಯ ವಿಧಾನಸಭಾ ಚುನಾವಣೆ ಮತದಾನ ಬಿರುಸಿನಿಂದ ಮುಂದುವರೆದಿದ್ದು, ಈ ನಡುವಲ್ಲೇ ಹಂಪಿ ನಗರದಲ್ರಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತ ನಡುವೆ ಮಾರಾಮಾರಿ ನಡೆದಿರುವುದಾಗಿ ಶನಿವಾರ ವರದಿಗಳು ತಿಳಿಸಿವೆ. 
ಪಾಲಿಕೆ ಬಿಜೆಪಿ ಸದಸ್ಯ ಆನಂದ್ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. 
ವಿಜಯನಗರದ ಬಿಜೆಪಿ ಅಭ್ಯರ್ಥಿ ರವೀಂದ್ರ ಅವರು ಮಾತನಾಡಿ, ಪಾಲಿಕೆ ಬಿಜೆಪಿಯ ಸದಸ್ಯ ಆನಂದ್ ಅವರ ಮೇಲೆ ಹಲ್ಲೆ ನಡೆಯುತ್ತಿದ್ದರು, ಸ್ಥಳದಲ್ಲಿದ್ದ ಪೊಲೀಸರು ಯಾವುದೇ ರೀತಿಯ ಕ್ರಮ ಕೈಗೊಳ್ಳಲಿಲ್ಲ ಎಂದು ಆರೋಪಿಸಿದ್ದಾರೆ. 
ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಡಿಸಿಪಿ ರವಿ ಚನ್ನಣ್ಣನವರ್ ಅವರು, ಇದು ಅತ್ಯಂತ ಸೂಕ್ಷ್ಮ ಮತದಾನ ವಲಯವಾಗಿದ್ದು, ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಕುರಿತು ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com