ಮುನಿರತ್ನ
ರಾಜ್ಯ
ಮುನಿರತ್ನ ವಿರುದ್ಧ ವಂಚನೆ, ಫೋರ್ಜರಿಗಾಗಿ ಎಫ್ಐಆರ್ ದಾಖಲಿಸಲು ಕೋರ್ಟ್ ಆದೇಶ: ಬಂಧನ ಭೀತಿಯಲ್ಲಿ ಶಾಸಕ!
ರಾಶಿ ರಾಶಿ ವೋಟರ್ಐಡಿ ಪತ್ತೆಯಾದ ಹಿನ್ನೆಲೆಯಲ್ಲಿ ಆರೋಪಿ ಪಟ್ಟಿಯಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ವಿರುದ್ಧ ....
ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ರಾಶಿ ರಾಶಿ ವೋಟರ್ಐಡಿ ಪತ್ತೆಯಾದ ಹಿನ್ನೆಲೆಯಲ್ಲಿ ಆರೋಪಿ ಪಟ್ಟಿಯಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಿಸಲು ನ್ಯಾಯಾಲಯ ಆದೇಶಿಸಿದೆ.
ಮುನಿರತ್ನ ಸೇರಿ ಎಲ್ಲ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 420, 468, 471ರಡಿ ಪ್ರಕರಣ ದಾಖಲಿಸುವಂತೆ ನಗರದ 24ನೇ ಎಸಿಎಂಎಂ ಕೋರ್ಟ್ಜಾಲಹಳ್ಳಿ ಪೊಲೀಸರಿಗೆ ಆದೇಶಿಸಿದೆ.
ಗುರುತಿನ ಚೀಟಿ ಯನ್ನು ರೇಡ್ ಮಾಡಲು ಹೋಗಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮುನಿರತ್ನ ವಿರುದ್ಧ ಎಫ್ ಐ ಆರ್ ದಾಖಲಿಸಲು ಸೂಚಿಸಲಾಗಿದೆ. ರಾಕೇಶ್ ಎಂಬುವವರು ಖಾಸಗಿ ದೂರು ಸಲ್ಲಿಸಿದ್ದರು.ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಶಾಸಕ ಮುನಿರತ್ನ ಬಂಧನ ಭೀತಿಯಲ್ಲಿದ್ದಾರೆ.
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ರಾಶಿ ರಾಶಿ ವೋಟರ್ ಐಡಿ ಪತ್ತೆಯಾದ ಹಿನ್ನೆಲೆಯಲ್ಲಿ ಆರೋಪಿ ಪಟ್ಟಿಯಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಿಸಲು ನ್ಯಾಯಾಲಯ ಆದೇಶಿಸಿದೆ.
ಗುರುತಿನ ಚೀಟಿ ಹಣದ ಆಮಿಷ ಹಾಗೂ ಬೇರೆ ವಿಧಾನದಲ್ಲಿ ಮತದಾರರ ಮೇಲೆ ಪ್ರಭಾವ ಬೀರಲು ಮತದಾರರ ಗುರುತಿನ ಚೀಟಿ ಸಂಗ್ರಹಿಸಿಟ್ಟುಕೊಳ್ಳಲಾಗಿತ್ತು. ಇದು ಗಂಭೀರ ಅಪರಾಧ ಮತ್ತು ಚುನಾವಣಾ ಅಕ್ರಮ ಎಂಬ ತೀರ್ಮಾನಕ್ಕೆ ಆಯೋಗ ಬಂದಿದೆ. ದೊರೆತ 9,564 ಗುರುತಿನ ಚೀಟಿಗಳು ಸದ್ಯ ಪೊಲೀಸ್ ವಶದಲ್ಲಿವೆ.
‘ಜಾಲಹಳ್ಳಿಯ ‘ಎಸ್‌ಎಲ್‌ವಿ ಪಾರ್ಕ್ ವ್ಯೂ’ ಅಪಾರ್ಟ್‌ಮೆಂಟ್ ಸಮುಚ್ಚಯದ ಫ್ಲ್ಯಾಟ್ ನಂಬರ್ 115ರಲ್ಲಿ ಚೀಟಿಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮಾಹಿತಿ ಪಡೆದಿದ್ದ ಬಿಜೆಪಿ ಕಾರ್ಯಕರ್ತರು, ಮೇ 8ರಂದು ಅಲ್ಲಿಗೆ ಹೋಗಿ ಪರಿಶೀಲಿಸಿದ್ದರು. ನಂತರ, ಸ್ಥಳಕ್ಕೆ ಹೋಗಿದ್ದ ಚುನಾವಣಾಧಿಕಾರಿಗಳು ಚೀಟಿಗಳಿರುವುದನ್ನು ಪತ್ತೆ ಹಚ್ಚಿದ್ದರು. ಅದೇ ವೇಳೆ, ಈ ಇಬ್ಬರು ಆರೋಪಿಗಳು ಫ್ಲ್ಯಾಟ್‌ನಲ್ಲೇ ಇದ್ದರು. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯದಲ್ಲಿ ಭಾಗಿಯಾಗಿದ್ದನ್ನು ಒಪ್ಪಿಕೊಂಡರು’ ಎನ್ನಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ