ವೈದ್ಯಕೀಯ ತಪಾಸಣೆಗಾಗಿ ಸಿಂಗಾಪುರಕ್ಕೆ ಹೆಚ್.ಡಿ.ಕುಮಾರಸ್ವಾಮಿ
ಜ್ವರದಿಂದ ಬಳಲುತ್ತಿದ್ದರೂ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪ್ರಚಾರ ಕಾರ್ಯ ನಡೆಸಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು, ಮತದಾನ ಪ್ರಕ್ರಿಯೆ ಅಂತ್ಯಗೊಳ್ಳುತ್ತಿದ್ದಂತೆಯೇ ವೈದ್ಯಕೀಯ ತಪಾಸಣೆಗಾಗಿ ಸಿಂಗಾಪುರಕ್ಕೆ ತೆರಳಿದ್ದಾರೆಂದು ಸೋಮವಾರ ತಿಳಿದುಬಂದಿದೆ...
ಬೆಂಗಳೂರು; ಜ್ವರದಿಂದ ಬಳಲುತ್ತಿದ್ದರೂ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪ್ರಚಾರ ಕಾರ್ಯ ನಡೆಸಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು, ಮತದಾನ ಪ್ರಕ್ರಿಯೆ ಅಂತ್ಯಗೊಳ್ಳುತ್ತಿದ್ದಂತೆಯೇ ವೈದ್ಯಕೀಯ ತಪಾಸಣೆಗಾಗಿ ಸಿಂಗಾಪುರಕ್ಕೆ ತೆರಳಿದ್ದಾರೆಂದು ಸೋಮವಾರ ತಿಳಿದುಬಂದಿದೆ.
ಮೇ.12ರಂದು ಮತದಾನ ಪ್ರಕ್ರಿಯೆ ಅಂತಿಮಗೊಳ್ಳುತ್ತಿದ್ದಂತೆಯೇ ಆರೋಗ್ಯ ತಪಾಸಣೆಗಾಗಿ ಸಿಂಗಾಪುರಕ್ಕೆ ತೆರಳಿದ್ದರು. ವೈದ್ಯಕೀಯ ತಪಾಸಣೆ ಪೂರ್ಣಗೊಂಡಿರುವುದಾಗಿ ತಿಳಿಬಂದಿದ್ದು, ಇಂದು ರಾತ್ರಿ ವಾಪಸ್ಸಾಗಲಿದ್ದಾರೆಂದು ವರದಿಗಳು ತಿಳಿಸಿವೆ.
ರಾಜ್ಯ ವಿಧಾನಸಭಾ ಚುನಾವಣೆ ಕುರಿತಂತೆ ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಅತಂತ್ರ ಫಲಿತಾಂಶಗಳ ಮುನ್ಸೂಚನೆಗಳನ್ನು ನೀಡುತ್ತಿವೆ. ಈ ನಡುವಲ್ಲೇ ಕಿಂಗ್ ಮೇಕರ್ ಎಂದೇ ಪರಿಗಣಿಸಲಾಗುತ್ತಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಸಿಂಗಾಪುರಕ್ಕೆ ಹಾರಿರುವುದು ಹಲವು ಕುತೂಹಲಕ್ಕೆ ಎಡೆಮಾಡಿಕೊಟ್ಟಿತ್ತು.
ಚುನಾವಣೆ ಪೂರ್ಣಗೊಂಡ ಕೂಡಲೇ ಕುಮಾರಸ್ವಾಮಿಯವರು ಸಿಂಗಾಪುರಕ್ಕೆ ಹಾರಿದ್ದು, ಊಹಾಪೋಹಗಳಿಗೆ ಕಾರಣವಾಗಿತ್ತು.