ಚುನಾವಣೆ ಕುರಿತು ರಾಜ್ಯ ಚುನಾವಣಾ ಆಯೋಗ ನೀಡಿರುವ ಮಾಹಿತಿ ಅನ್ವಯ, ಮತದಾನದ ಮುಕ್ತಾಯದ ವೇಳೆ ರಾಜ್ಯದಲ್ಲಿ ಬರೊಬ್ಬರಿ ರೂ. 186 ಕೋಟಿ ಮೌಲ್ಯದ ಹಣ, ಮದ್ಯ ಮತ್ತು ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈವರೆಗೆ ದೇಶದ ಯಾವುದೇ ಚುನಾವಣೆಯಲ್ಲೂ ಇಷ್ಟು ದೊಡ್ಡ ಮೌಲ್ಯದ ನಗದು, ಮದ್ಯ ಹಾಗೂ ಇನ್ನಿತರ ಅಮಿಷವೊಡ್ಡುವ ವಸ್ತುಗಳನ್ನು ವಶಪಡಿಸಿಕೊಂಡ ನಿದರ್ಶನ ಇಲ್ಲ ಎಂದೂ ಆಯೋಗ ಸ್ಪಷ್ಟಪಡಿಸಿದೆ.