ಮತ ಎಣಿಕೆ ಕಾರ್ಯ ಆರಂಭ; ಕಾಂಗ್ರೆಸ್-ಬಿಜೆಪಿ ನಡುವೆ ತೀವ್ರ ಪೈಪೋಟಿ

Published On :
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ ಸ್ಟ್ರಾಂಗ್ ರೂಂ ತೆರೆದು, ಮತ ಎಣಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
ಆರಂಭದಲ್ಲಿ ಅಂಚೆ ಮತಗಳ ಎಣಿಕೆ ಕಾರ್ಯ ನಡೆದಿದ್ದು, ಒಟ್ಟು 38 ಮತ ಎಣಿಕೆ ಕೇಂದ್ರಗಳಲ್ಲಿ ಅಂಚೆ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಇನ್ನು ಮತ ಎಣಿಕೆ ಕಾರ್ಯ ಆರಂಭದಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹಾಗೂ ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಅಂಚೆ ಮತಗಳ ಎಣಿಕೆ ಮುಕ್ತಾಯ
ಶಿವಮೊಗ್ಗ ಜಿಲ್ಲೆಯ ಸಾಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾಗೋಡು ತಿಮ್ಮಪ್ಪ ಮತ್ತು ಸೊರಬದಲ್ಲಿ ಜೆಡಿಎಸ್ನ ಮಧು ಬಂಗಾರಪ್ಪಗೆ ಮುನ್ನಡೆಸಾಧಿಸಿದ್ದಾರೆ. ಅಂತೆಯೇ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕ್ಷೇತ್ರದಲ್ಲಿ ಕಾಂಗ್ರೆಸ್ನ ರಮಾನಾಥ ರೈ ಮುನ್ನಡೆ ಸಾಧಿಸಿದ್ದು, ಹಾವೇರಿ ಕಾಂಗ್ರೆಸ್ ಅಭ್ಯರ್ಥಿ ರುದ್ರಪ್ಪ ಲಮಾಣಿ ಮುನ್ನಡೆ ಸಾಧಿಸಿದ್ದಾರೆ.
ಉಳಿದಂತೆ ಬಬಲೇಶ್ವರದಲ್ಲಿ ಕಾಂಗ್ರೆಸ್ನ ಎಂ.ಬಿ. ಪಾಟೀಲ, ಇಂಡಿಯಲ್ಲಿ ಕಾಂಗ್ರೆಸ್ನ ಯಶವಂತರಾಯಗೌಡ ಪಾಟೀಲ, ವಿಜಯಪುರ ನಗರದಲ್ಲಿ ಬಿಜೆಪಿಯ ಬಸನಗೌಡ ಪಾಟೀಲ ಯತ್ನಾಳ ಮುನ್ನಡೆ ಸಾಧಿಸಿದ್ದಾರೆ.
ಇತ್ತ ತೀವ್ರ ಕುತೂಹಲ ಕೆರಳಿಸಿರುವ ಚಾಮುಂಡೇಶ್ವರಿಯಲ್ಲಿ ಜೆಡಿಎಸ್ ಅಭ್ಯರ್ಥಿ ಜಿಟಿ ದೇವೇಗೌಡ ಅವರು ಬರೊಬ್ಬರಿ 6904 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ನ ರವೀಂದ್ರ, ಚಿಕ್ಕಮಗಳೂರಿನಲ್ಲಿ ಬಿಜೆಪಿಯ ಸಿ.ಟಿ. ರವಿ, ಬೆಳ್ತಂಗಡಿಯಲ್ಲಿ ಬಿಜೆಪಿಯ ಹರೀಶ್ ಪೂಂಜಾ ಮುನ್ನಡೆ ಸಾಧಿಸಿದ್ದಾರೆ.
ಇತ್ತ ಶಿಕಾರಿ ಪುರದಲ್ಲಿ ಬಿಎಸ್ ಯಡಿಯೂರಪ್ಪ, ಚಾಮರಾಜಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹ್ಮದ್ ಖಾನ್ ಮುನ್ನಡೆ ಸಾಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುCongressಕಾಂಗ್ರೆಸ್BengaluruJDSbjpಬಿಜೆಪಿಜೆಡಿಎಸ್Karnataka Assembly Electionಕರ್ನಾಟಕ ವಿಧಾನಸಭೆ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


