ಮತ ಎಣಿಕೆ ಕೇಂದ್ರಗಳಲ್ಲಿ ಬಿಗಿ ಭದ್ರತೆ, ಪೊಲೀಸ್ ಸಿಬ್ಬಂದಿ ನಿಯೋಜನೆ

ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ದಿನವಾದ ಮಂಗಳವಾರ ....
ಕಲಬುರಗಿಯಲ್ಲಿ ಭದ್ರತಾ ಸಿಬ್ಬಂದಿ
ಕಲಬುರಗಿಯಲ್ಲಿ ಭದ್ರತಾ ಸಿಬ್ಬಂದಿ

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ದಿನವಾದ ಮಂಗಳವಾರ ಕೇಂದ್ರ ಚುನಾವಣಾ ಆಯೋಗ ತೀವ್ರ ಭದ್ರತೆ ಕಲ್ಪಿಸಿದೆ.

ರಾಜ್ಯದ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತ ಎಣಿಕೆ ಕೇಂದ್ರಗಳಲ್ಲಿ ಕೇಂದ್ರ ಸೇನಾ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ ಸಾಕಷ್ಟು ಭದ್ರತಾ ಸಿಬ್ಬಂದಿಗಳು ಇರಲಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯುಕ್ತ ಒ.ಪಿ.ರಾವತ್ ತಿಳಿಸಿದ್ದಾರೆ.


ರಾಜ್ಯದ 38 ಮತ ಎಣಿಕೆ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡಲು 50,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅವರಲ್ಲಿ 11,000 ಪೊಲೀಸ್ ಸಿಬ್ಬಂದಿಗಳು ಬೆಂಗಳೂರು ನಗರವೊಂದರಲ್ಲಿಯೇ ಇರುತ್ತಾರೆ.
ಒಂದು ಕ್ಷಿಪ್ರ ಕಾರ್ಯಪಡೆ ತುಕಡಿ ಮತ್ತು 20 ಕರ್ನಾಟಕ ರಾಜ್ಯ ಮೀಸಲು ಪಡೆ ತುಕಡಿಗಳನ್ನು ಬೆಂಗಳೂರಿನಲ್ಲಿ ನಿಯೋಜಿಸಲಾಗಿದೆ.



ಮತದಾನ ಪ್ರಕ್ರಿಯೆ ಸುಗಮವಾಗಿ ಸಾಗಿದಂತೆ ಇಂದು ಮತ ಎಣಿಕೆ ಕಾರ್ಯದಲ್ಲಿಯೂ ಯಾವುದೇ ಅಹಿತಕರ ಘಟನೆ, ಗಲಭೆ ನಡೆಯದಂತೆ ನೋಡಿಕೊಳ್ಳಲು ಚುನಾವಣಾ ಆಯೋಗ ಸಕಲ ಕ್ರಮ ಕೈಗೊಂಡಿದೆ.

ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು ಪಟಾಕಿ ಸಿಡಿಸಿ ಸಂಭ್ರಮಿಸುವುದು, ಇತರ ಸಂಭ್ರಮಾಚರಣೆಗಳು ಮತ್ತು ಮೆರವಣಿಗೆಗಳಿಗೆ ಪೊಲೀಸರು ನಿಷೇಧ ಹೇರಿದ್ದಾರೆ.
ಬೆಂಗಳೂರಿನ 5 ಮತ ಕೇಂದ್ರಗಳಲ್ಲಿ ಮೂರು ಪದರದ ವ್ಯವಸ್ಥೆಗಳನ್ನು ಮಾಡಲಾಗಿದೆ. ಇಲ್ಲಿನ ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com