ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಇದೀಗ ಕೆಲ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ.
ಮೊದಲಿಗೆ ನಾಲ್ವರು ಐಪಿಎಲ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು ಇದೀಗ ಚಿಕ್ಕಮಗಳೂರು ಎಸ್‌ಪಿ ಅಣ್ಣಾಮಲೈ ಅವರನ್ನು ರಾಮನಗರದ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಇದುವರೆಗೂ ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಆಗಿದೆ. ಇನ್ನು ಹಿರಿಯ ಐಎಎಸ್ ಅಧಿಕಾರಿ ಎಂ. ಲಕ್ಷ್ಮೀನಾರಾಯಣ್ ರನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.