ಇದೇ ವೇಳೆ ಯಡಿಯೂರಪ್ಪ ಅವರ ಪ್ರಮಾಣ ವಚನ ಸ್ವೀಕಾರಕ್ಕೆ ತಡೆ ನೀಡುವುದಿಲ್ಲ ಎಂದು ಸುಪೀಂ ಕೋರ್ಟ್ ಹೇಳಿದ್ದರೂ, ಯಡಿಯೂರಪ್ಪ ಅವರಿಗೆ ಈ ಬಗ್ಗೆ ನೋಟಿಸ್ ನೀಡುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ರಾಜ್ಯಪಾಲರಿಗೆ ಸಲ್ಲಿಕೆ ಮಾಡಿರುವ ಶಾಸಕರ ಬೆಂಬಲ ಪತ್ರ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಬಿಎಸ್‌ವೈಗೆ ಸೂಚನೆ ನೀಡಿದೆ. ಅಂತೆಯೇ ಎರಡು ಪಕ್ಷಗಳಿಗೂ ಬೆಂಬಲ ಪತ್ರ ಸಲ್ಲಿಕೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು, ನಾಳೆ ಬೆಳಗ್ಗೆ 10:30ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದೆ.