ಬಸವನಬಾಗೇವಾಡಿ: 8 ವಿವಿ ಪ್ಯಾಟ್ ಪತ್ತೆ, ಚುನಾವಣಾ ಅಕ್ರಮದ ಶಂಕೆ

ಬಸವನಬಾಗೇವಾಡಿ ತಾಲೂಕಿನ ಮನಗೂಳಿಯಲ್ಲಿ ಮತ ಖಾತ್ರಿ ಯಂತ್ರ (ವಿವಿಪ್ಯಾಟ್ ಯಂತ್ರ)ಗಳು ಖಾಲಿ ಇರುವ ಸ್ಥಿತಿಯ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಚುನಾವಣಾ ಅಕ್ರಮ ನಡೆದಿರುವ ಸಾಧ್ಯತೆಯ ಬಗ್ಗೆ ಶಂಕೆ ಮೂಡಿಸಿದೆ.
ವಿವಿಪ್ಯಾಟ್ (ಸಂಗ್ರಹ ಚಿತ್ರ)
ವಿವಿಪ್ಯಾಟ್ (ಸಂಗ್ರಹ ಚಿತ್ರ)
ಬಸವನಬಾಗೇವಾಡಿ: ಬಸವನಬಾಗೇವಾಡಿ ತಾಲೂಕಿನ ಮನಗೂಳಿಯಲ್ಲಿ ಮತ ಖಾತ್ರಿ ಯಂತ್ರ (ವಿವಿಪ್ಯಾಟ್ ಯಂತ್ರ)ಗಳು ಖಾಲಿ ಇರುವ ಸ್ಥಿತಿಯ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಚುನಾವಣಾ ಅಕ್ರಮ ನಡೆದಿರುವ ಸಾಧ್ಯತೆಯ ಬಗ್ಗೆ ಶಂಕೆ ಮೂಡಿಸಿದೆ. 
ರಾಷ್ಟ್ರೀಯ ಹೆದ್ದಾರಿಗೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಮಾಡುತ್ತಿರುವ ಕಾರ್ಮಿಕರು ವಿವಿಪ್ಯಾಟ್ ಯಂತ್ರಗಳನ್ನು ಶೆಡ್ ನಲ್ಲಿ ಸಂಗ್ರಹಿಸಿಟ್ಟಿದ್ದರು.  ಸುದ್ದಿ ತಿಳಿಯುತ್ತಿದ್ದಂತೆಯೇ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸಿದ್ದಾರೆ.  ‘ಚುನಾವಣೆಯಲ್ಲಿ ಅಕ್ರಮ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಜೊತೆಗೆ ಮರು ಚುನಾವಣೆ ನಡೆಸಬೇಕು’ ಎಂದು  ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿಗಳು ಆಗ್ರಹಿಸಿದ್ದಾರೆ. 
ಈ ಕುರಿತಂತೆ ಸಿಬಿಐ ತನಿಖೆ ನಡೆಸಲು ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಕಾಂಗ್ರೆಸ್‌ನ ಅಬ್ದುಲ್‌ ಹಮೀದ್ ಮುಶ್ರೀಫ್‌ ಆಗ್ರಹಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com