ಮೂಲಗಳ ಪ್ರಕಾರ ಈ ಸಮನ್ವಯ ಸಮಿತಿಗೆ ಸಿದ್ದರಾಮಯ್ಯ ಅಧ್ಯಕ್ಷರಾಗಿರಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಭಾವಿ ಸರ್ಕಾರದಲ್ಲಿ ಇಬ್ಬರು ಉಪ ಮುಖ್ಯಮಂತ್ರಿ ಸ್ಥಾನ ಸೃಷ್ಟಿಯಾಗುವ ಸಾಧ್ಯತೆ ಇದ್ದು, ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಮತ್ತು ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ ಪಟ್ಟದ ಜೊತೆಗೆ 14 ಸಚಿವ ಸ್ಥಾನಗಳಿಗೆ ಜೆಡಿಎಸ್, ಒಂದು ಉಪ ಮುಖ್ಯಮಂತ್ರಿ ಸ್ಥಾನ ಸೇರಿ 20 ಸಚಿವ ಸ್ಥಾನ ಕಾಂಗ್ರೆಸ್ ಹಂಚಿಕೊಳ್ಳುವ ಬಗ್ಗೆ ಮಾತುಕತೆ ನಡೆದಿದೆ. ಈ ಮಧ್ಯೆ, ಎರಡು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವಂತೆ ಕಾಂಗ್ರೆಸ್ ಒತ್ತಡ ಹೇರುತ್ತಿದೆ ಎಂದೂ ಹೇಳಲಾಗಿದೆ.