

ಮೈಸೂರು: ಜಯದೇವ ಹೃದ್ರೋಗ ಸಂಸ್ಥೆಯ 350 ಹಾಸಿಗೆಗಳ ನೂತನ ಆಸ್ಪತ್ರೆ ಮೈಸೂರಿನ ಕೆಆರ್ ಎಸ್ ರಸ್ತೆಯಲ್ಲಿರುವ ಪಿಕೆಟಿಬಿ ಆವರಣದಲ್ಲಿ ಜುಲೈಯಿಂದ ಸಂಪೂರ್ಣವಾಗಿ ಕಾರ್ಯನಿರ್ವಹಿಸಲಿದೆ.
ಕಳೆದ ಮಾರ್ಚ್ 10ರಂದೇ ಈ ಆಸ್ಪತ್ರೆ ಉದ್ಘಾಟನೆಗೊಂಡಿದ್ದರೂ ಸಹ ಸಂಪೂರ್ಣವಾಗಿ ಸುಸಜ್ಜಿತವಾಗಬೇಕಷ್ಟೆ. ಉಪಕರಣಗಳನ್ನು ಸ್ಥಾಪಿಸುವ ಕಾರ್ಯ ಅಂತಿಮ ಹಂತದಲ್ಲಿದೆ. ಸುಮಾರು 210 ಕೋಟಿ ರೂಪಾಯಿ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಿಸಲಾಗಿದೆ.
ಈ ಕುರಿತು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಆಸ್ಪತ್ರೆ ನಿರ್ದೇಶಕ ಡಾ.ಸಿ. ಮಂಜುನಾಥ್, ಉಪಕರಣಗಳನ್ನು ಸಂಪೂರ್ಣವಾಗಿ ಸ್ಥಾಪಿಸಿದ ನಂತರ ಕಾರ್ಯಾರಂಭ ಮಾಡಲಿದೆ. ಬೆಂಗಳೂರಿನ ಆಸ್ಪತ್ರೆಯಂತೆ ಮೈಸೂರಿನ ಆಸ್ಪತ್ರೆ ಕೂಡ ರೋಗಿಗಳಿಗೆ ಉತ್ತಮ ಸೇವೆ ಮತ್ತು ರಿಯಾಯಿತಿ ದರದಲ್ಲಿ ಕೆಲವೊಂದು ಆರೋಗ್ಯ ಸೇವೆಗಳನ್ನು ಒದಗಿಸಲಿದೆ ಎಂದರು.