ಬಹುಮತ ಸಾಬೀತು ವೇಳೆ ಶಾಸಕರಿಗೆ ಆಮಿಷ ಆರೋಪ: ಬಿಜೆಪಿ ವಿರುದ್ಧ ಕೆಪಿಸಿಸಿ ವಕೀಲರ ದೂರು
ರಾಜ್ಯ ವಿಧಾನಸಭೆ ಅತಂತ್ರಗೊಂಡ ಸಂದರ್ಭದಲ್ಲಿ ಬಹುಮತ ಸಾಬೀತು ಪಡಿಸುವ ವೇಳೆ ಬಿಜೆಪಿಗೆ ಬೆಂಬಲ ನೀಡುವಂತೆ ಕಾಂಗ್ರೆಸ್-ಜೆಡಿಎಸ್ ಶಾಸಕರಿಗೆ ಆಮಿಷ ಒಡ್ಡಲಾಗಿದೆ ಎಂದು ಆರೋಪಿಸಿ ಬಿಜೆಪಿ ವಿರುದ್ಧ ಕೆಪಿಸಿಸಿ ಕಾನೂನು ಘಟಕದ ವಕೀಲರು ಎಸಿಬಿಗೆ ಗುರುವಾರ ದೂರು ನೀಡಿದ್ದಾರೆ...
ಬೆಂಗಳೂರು: ರಾಜ್ಯ ವಿಧಾನಸಭೆ ಅತಂತ್ರಗೊಂಡ ಸಂದರ್ಭದಲ್ಲಿ ಬಹುಮತ ಸಾಬೀತು ಪಡಿಸುವ ವೇಳೆ ಬಿಜೆಪಿಗೆ ಬೆಂಬಲ ನೀಡುವಂತೆ ಕಾಂಗ್ರೆಸ್-ಜೆಡಿಎಸ್ ಶಾಸಕರಿಗೆ ಆಮಿಷ ಒಡ್ಡಲಾಗಿದೆ ಎಂದು ಆರೋಪಿಸಿ ಬಿಜೆಪಿ ವಿರುದ್ಧ ಕೆಪಿಸಿಸಿ ಕಾನೂನು ಘಟಕದ ವಕೀಲರು ಎಸಿಬಿಗೆ ಗುರುವಾರ ದೂರು ನೀಡಿದ್ದಾರೆ.
ಬಹುಮತ ಸಾಬೀತು ಪಡೆಸುವ ಸಂದರ್ಭದಲ್ಲಿ ಶಾಸಕರಿಗೆ ಆಮಿಷ ಒಡ್ಡಿದ್ದಾರೆಂದು ಆರೋಪಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂದೆ ಬಿಜೆಪಿ ಪಕ್ಷದ ಮುಖಂಡರ ವಿರುದ್ಧ ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.
ದೂರಿನ ಪ್ರತಿಯೊಂದಿಗೆ ಆಮಿಷವೊಡ್ಡಿರುವುದಕ್ಕೆ ಸಾಕ್ಷಿಯಾಧಾರವೆಂದು ಆಡಿಯೋ ಕ್ಲಿಪ್ ಗಳನ್ನೂ ಅಧಿಕಾರಿಗಳಿಗೆ ವಕೀಲರು ಸಲ್ಲಿಸಿದ್ದಾರೆ.