'ಸಾವಿನ ವದಂತಿ ನೋವು ತಂದಿದೆ': ದೂರು ದಾಖಲಿಸಿದ ಸಾಲುಮರದ ತಿಮ್ಮಕ್ಕ

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಬ್ಬಿದ ತಮ್ಮ ಸಾವಿನ ವದಂತಿ ಕುರಿತು ಸಾಲುಮರದ ತಿಮ್ಮಕ್ಕ ತೀವ್ರ ನೋವು ವ್ಯಕ್ತಪಡಿಸಿದ್ದು, ಈ ಸಂಬಂಧ ಪೊಲೀಸ್ ದೂರು ದಾಖಲಿಸಿದ್ದಾರೆ.
ಸಾಲುಮರದ ತಿಮ್ಮಕ್ಕ
ಸಾಲುಮರದ ತಿಮ್ಮಕ್ಕ
ಬೆಂಗಳೂರು: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಬ್ಬಿದ ತಮ್ಮ ಸಾವಿನ ವದಂತಿ ಕುರಿತು ಸಾಲುಮರದ ತಿಮ್ಮಕ್ಕ ತೀವ್ರ ನೋವು ವ್ಯಕ್ತಪಡಿಸಿದ್ದು, ಈ ಸಂಬಂಧ ಪೊಲೀಸ್ ದೂರು ದಾಖಲಿಸಿದ್ದಾರೆ.
ಈ ಬಗ್ಗೆ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸಾಲುಮರದ ತಿಮ್ಮಕ್ಕ, ನಾನಿನ್ನೂ ಜೀವಂತವಾಗಿದ್ದೇನೆ. ನನ್ನ ಸಾವಿನ ಸುಳ್ಳು ಸುದ್ದಿ ನನಗೆ ತುಂಬಾ ಬೇಸರ ತಂದಿದೆ. ಈ ರೀತಿ ಸುಳ್ಳು ಸುದ್ದಿ ಹಬ್ಬಿಸುವ ಮೊದಲು ಸತ್ಯಾಸತ್ಯತೆ ತಿಳಿದುಕೊಳ್ಳಬೇಕು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಇದೇ ವಿಚಾರವಾಗಿ ಇಂದು ಪೊಲೀಸ್ ಕಮೀಷನರ್​ ಕಚೇರಿಗೆ ತೆರಳಿ ದೂರು ದಾಖಲಿಸಿದ್ದಾರೆ.
'ಈ ರೀತಿ ಸುಳ್ಳು ಸುದ್ದಿ ಹಬ್ಬಿಸುವುದನ್ನು ಕೂಡಲೇ ನಿಲ್ಲಿಸಬೇಕು. ಈ ವಿಚಾರವಾಗಿ ಮಾಧ್ಯಮ ಮಿತ್ರರಾದರೂ ನನಗೆ ನ್ಯಾಯ ದೊರಕಿಸಿಕೊಡಿ ಎಂದು ಮನವಿ ಮಾಡಿದರು. ಅಲ್ಲದೇ ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಫೀಸ್​ನಲ್ಲಿ ದೂರು ಸಲ್ಲಿಸಿದ್ದೇನೆ. ಕೂಡಲೇ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದೇನೆ ಎಂದರು. ನಾನು ಯಾರಿಗೂ ಕೆಟ್ಟದ್ದು ಬಯಸಿಲ್ಲ, ಆದ್ರೆ ನನ್ನ ಬಗ್ಗೆ ಈ ರೀತಿ ಸುಳ್ಳು ವದಂತಿ ನೋಡಿ ಬೇಸರವೆನಿಸಿದೆ ಎಂದು ಹೇಳಿದರು. 
ಇದೇ ವೇಳೆ ತಿಮ್ಮಕ್ಕ ಅವರ ದತ್ತು ಪುತ್ರ ಉಮೇಶ್ ಮಾತನಾಡಿ​, ತಿಮ್ಮಕ್ಕನವರು ಜೀವಂತವಾಗಿಯೇ ಇದ್ದಾರೆ. ಆದರೆ ಈ ರೀತಿಯ ಸುದ್ದಿ ನೋಡಿ ನನಗೆ ಬೇಸರವಾಗಿದೆ. ಅವರಿಗೆ ರಾಜ್ಯ, ದೇಶ, ವಿದೇಶದಲ್ಲಿಯೂ ಬಹಳಷ್ಟು ಅಭಿಮಾನಿಗಳು ಇದ್ದಾರೆ. ಈ ರೀತಿಯ ಸುಳ್ಳು ಸುದ್ದಿ ನೋಡಿ ಎಲ್ಲರೂ ಫೋನ್ ಮಾಡ್ತಿದ್ದಾರೆ. ಎಲ್ಲರಿಗೂ ಉತ್ತರಿಸುವುದು ಸ್ವಲ್ಪ ಕಷ್ಟವಾಗುತ್ತಿದೆ. ಅವರು ಆರೋಗ್ಯವಾಗಿದ್ದಾರೆ ಇನ್ನೂ ಬಹಳಷ್ಟು ವರ್ಷ ಇರ್ತಾರೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com