ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿ ವಜಾ

ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೊಹಮ್ಮದ್ ನಲಪಾಡ್ ಜಾಮೀನು ....
ಮೊಹಮ್ಮದ್ ನಲಪಾಡ್
ಮೊಹಮ್ಮದ್ ನಲಪಾಡ್

ಬೆಂಗಳೂರು:  ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿಯನ್ನು 63ನೇ ಸೆಷನ್ಸ್ ನ್ಯಾಯಾಲಯ ಬುಧವಾರ ಎರಡನೇ ಬಾರಿ ವಜಾಗೊಳಿಸಿದೆ.

ಇದೊಂದು ಕೊಲೆಯತ್ನ ಪ್ರಕರಣವಾಗಿದ್ದು, ಬೆಂಗಳೂರಿನಲ್ಲಿಯೇ ಭೀತಿ ಹುಟ್ಟಿಸುವ ಘಟನೆಯಾಗಿತ್ತು. ಆರೋಪಿ ಪ್ರಭಾವಿ ವ್ಯಕ್ತಿಯಾಗಿರುವುದರಿಂದ ಹೊರಬಂದರೆ ಸಾಕ್ಷಿಗಳನ್ನು ನಾಶಪಡಿಸುವ, ಸಾಕ್ಷಿಗಳಿಗೆ ಬೆದರಿಕೆಯೊಡ್ಡುವ ಸಾಧ್ಯತೆಯಿರುವುದರಿಂದ ಮತ್ತು ವೈದ್ಯಕೀಯ ವರದಿಗಳನ್ನು ನಾಶಪಡಿಸುವ ಸಾಧ್ಯತೆಯಿರುವುದರಿಂದ ನಲಪಾಡ್ ಗೆ ಜಾಮೀನು ನೀಡಲು ನಿರಾಕರಿಸಿ ನ್ಯಾಯಾಧೀಶ ಬಿ.ಪರಮೇಶ್ವರ್ ಪ್ರಸನ್ನ ಆದೇಶ ನೀಡಿದ್ದಾರೆ.

ವಿದ್ವತ್ ನೀಡಿದ ಘಟನೆಯ ವಿವರ 'ಇದು ಭಯ ಹುಟ್ಟಿಸುವ ಪ್ರಕರಣವಾಗಿದೆ. ಆರೋಪಿ ಪ್ರಭಾವಿಯಾಗಿದ್ದು, ಹೊರ ಬಂದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ವಾದ ಮಂಡನೆ ಮಾಡಲಾಗಿತ್ತು. ವಾದಕ್ಕೆ ಮನ್ನಣೆ ನೀಡಿದ ಕೋರ್ಟ್, ಅರ್ಜಿ ತಿರಸ್ಕರಿಸಿದೆ ಎಂದು ವಿಶೇಷ ಸರ್ಕಾರಿ ಅಭಿಯೋಜಕ ಶ್ಯಾಮ್ ಸುಂದರ್ ಹೇಳಿದರು.

ಫೆಬ್ರವರಿಯಿಂದ 99 ದಿನಗಳಿಂದ ಮೊಹಮ್ಮದ್ ನಲಪಾಡ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾನೆ. ಹೀಗಾಗಿ ತನಗೆ ಜಾಮೀನು ನೀಡಬೇಕೆಂದು ನಲಪಾಡ್ ಪರ ವಕೀಲ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.

ವಿಶೇಷ ಸರ್ಕಾರಿ ಅಭಿಯೋಜಕ ಶ್ಯಾಂ ಸುಂದರ್ ಅವರು ಜಾಮೀನು ನೀಡಬಾರದು ಎಂದು ವಾದ ಮಂಡಿಸಿದ್ದರು.

ವಿದ್ವತ್ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ನಡೆಸಿ 600 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ. ಮೊಹಮ್ಮದ್ ನಲಪಾಡ್, ಅರುಣ್ ಬಾಬು, ಶ್ರೀ ಕೃಷ್ಣ, ಮಂಜುನಾಥ್, ಆಶ್ರಫ್, ಬಾಲಕೃಷ್ಣ, ಅಭಿಷೇಕ್, ನಾಸಿರ್ ಈ ಪ್ರಕರಣದ ಆರೋಪಿಗಳಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com