ಗೌರಿ ಲಂಕೇಶ್ ಹತ್ಯೆ: ಎಸ್ಐಟಿಯಿಂದ 650 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ಮೊದಲ ಹಂತದಲ್ಲಿ 650 ಪುಟಗಳ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್‌) ಸಲ್ಲಿಸಿದೆ..
ಗೌರಿ ಲಂಕೇಶ್
ಗೌರಿ ಲಂಕೇಶ್
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ಮೊದಲ ಹಂತದಲ್ಲಿ 650 ಪುಟಗಳ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್‌) ಸಲ್ಲಿಸಿದೆ..
ಗೌರಿ ಲಂಕೇಶ್ ಹತ್ಯೆಯಾಗಿ ಎಂಟು ತಿಂಗಳ ಬಳಿಕ ದೋಷಾರೋಪ ಪಟ್ಟಿಯನ್ನು ಎಸ್‌ಐಟಿ 3ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದೆ. .ಈ ದೋಷಾರೋಪ ಪಟ್ಟಿಯಲ್ಲಿ 131 ಸಾಕ್ಷಿಗಳ ಹೇಳಿಕೆ ದಾಖಲಾಗಿದೆ.
ಕೆ.ಟಿ. ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜನಿಗೆ ಗೌರಿ ಹಂತಕರ ಕುರಿತಂತೆ ಸಂಪೂರ್ಣ ಮಾಹಿತಿ ಇತ್ತು. ಆದರೆ ಹಂತಕರ ಕುರುಹು ದೊರೆಯುತ್ತದೆ ಎನ್ನುವ ಕಾರಣಕ್ಕೆ ಅವರ ಹೆಸರನ್ನು ಹೇಳುತ್ತಿಲ್ಲ, ಅದೇ ಕಾರಣಕ್ಕೆ ಆತ ಮಂಪರು ಪರೀಕ್ಷೆಯನ್ನೂ ನಿರಾಕರಿಸಿದ್ದಾನೆ ಎಂದು ದೋಷಾರೋಪ ಪಟ್ಟಿಯಲಿ ಉಲ್ಲೇಖಿಸಲಾಗಿದೆ.
2017ರ ಸೆಪ್ಟೆಂಬರ್ 5ರಂದು ರಾಜರಾಜೇಶ್ವರಿ ನಗರದಲ್ಲಿರುವ ಗೌರಿ ಲಂಕೇಶ್ ಅವರ ಮನೆಯ ಎದುರೇ ಅವರ ಮೇಲೆ ಗುಂಡಿನ ದಾಳಿ  ನಡೆದಿದ್ದು ಆ ದಾಳಿಯಲ್ಲಿ ಗೌರಿ ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com